(ಪ್ರಾತಿನಿಧಿಕ ಚಿತ್ರ)
ದಕ್ಷಿಣ ಬೆಂಗಳೂರಿನ ಹುಳಿಮಾವುನಲ್ಲಿರುವ ವಸತಿ ಸಮುಚ್ಚಯದ 29ನೇ ಮಹಡಿಯಿಂದ ಹಾರಿ 12 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಬುಧವಾರ ಮುಂಜಾನೆ ಈ ಘಟನೆ ನಡೆದಿದೆ.
ಬಾಲಕಿಯ ಮನೆಯವರು ಹೇಳುವ ಪ್ರಕಾರ ಮುಂಜಾನೆ 4.30ಕ್ಕೆ ಎದ್ದು ಹಾಲ್ ಗೆ ಹೋಗಿದ್ದಾಳೆ. ಇಷ್ಟು ಬೇಗ ಏಳಲು ಕಾರಣವೇನು ಎಂದು ಆಕೆಯ ತಾಯಿ ಕೇಳಿದಾಗ, ಹುಡುಗಿ ಮತ್ತೆ ಮಲಗಲು ತನ್ನ ಕೋಣೆಗೆ ಮರಳಿದಳು
ಮುಂಜಾನೆ 5 ಗಂಟೆ ಸುಮಾರಿಗೆ ಬಾಲಕಿ ಕಟ್ಟಡದಿಂದ ಜಿಗಿದಿದ್ದಾಳೆ. ಭದ್ರತಾ ಸಿಬ್ಬಂದಿ ಆಕೆಯ ಪೋಷಕರಿಗೆ ಮತ್ತು ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ಕೃತ್ಯಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಆದರೆ ಕೌಟುಂಬಿಕ ಸಮಸ್ಯೆಗಳಿಂದ ಬಾಲಕಿ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಾಲಕಿ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿ ಓದುತ್ತಿದ್ದಳು. ಆಕೆಯ ತಂದೆ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ತಾಯಿ ಗೃಹಿಣಿ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

