ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಳೆದ ವರ್ಷ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಗುರುವಾರ ಬಿಜೆಪಿಗೆ ಮರಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಕಳೆದ ವರ್ಷ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಗುರುವಾರ ಬಿಜೆಪಿಗೆ ಮರಳಿದ್ದಾರೆ.
ರಾಜಕೀಯವಾಗಿ ಪ್ರಭಾವಿ ಲಿಂಗಾಯತ ಸಮುದಾಯಕ್ಕೆ ಸೇರಿದ ಶೆಟ್ಟರ್ ಅವರು ಟಿಕೆಟ್ ನಿರಾಕರಿಸಿದಾಗ ಬಿಜೆಪಿಯನ್ನು ತೊರೆದಿದ್ದರು. ನಂತರ ಅವರು ಕಾಂಗ್ರೆಸ್ ಸೇರಿದರು.
ಕರ್ನಾಟಕದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ- ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ಬಿಜೆಪಿಗೆ ಮರು ಸೇರ್ಪಡೆಗೊಂಡರು.
ಕಳೆದ ವರ್ಷ ಏಪ್ರಿಲ್‌ನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.