ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸು ಹೆಚ್ಚು ಎಂದು ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ರಾಮನಗರ ಎಂಬಲ್ಲಿ ನಡೆದಿದೆ.
ಬಿ.ಬಿ.ಮುಸ್ಕಾನ್ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು.
ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು ಆಕೆಗೆ ವಯಸ್ಸಿನ ಅಂತರ ಹೆಚ್ಚಾದ ಹಿನ್ನೆಲೆಯಲ್ಲಿ ಈ ಮದುವೆಗೆ ಮೊದಲು ಒಪ್ಪಿಕೊಂಡಿರಲಿಲ್ಲ. ನಂತರ ಮನೆಯವರ ಒತ್ತಾಯದಿಂದ ಈ ಮದುವೆಗೆ ಒಪ್ಪಿಕೊಂಡಿದ್ದಳು
ಆದರೆ ಆಗ ಮನೆಯವರ ಬಲವಂತಕ್ಕೆ ಮದುವೆಗೆ ಒಪ್ಪಿಕೊಂಡಿದ್ದವಳು ಈಗ ಮದುವೆಯಲ್ಲಿ ಬೇಸರ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜನವರಿ 24 ರಂದು ರಾತ್ರಿ ಉಟ ಮುಗಿಸಿಕೊಂಡು ಮಲಗಲು ಹೋದ ಯುವತಿ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿದ್ದಾಳೆ. ಈ ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು, ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮನೆಯವರು ಹಾಗೂ ನಿಶ್ಚಿತಾರ್ಥವಾಗಿದ್ದ ಹುಡುಗನ ಮನೆಯವರನ್ನು ವಿಚಾರಣೆ ನಡೆಸುತ್ತಿದ್ದಾರೆ.