ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ- ೧೪
(ರಾಷ್ಟ್ರ ಮಟ್ಟದ 5 ದಿನಗಳ ಕಾಲ ಸಾಂಸ್ಕøತಿಕ ಉತ್ಸವ)
2024 ಮಾರ್ಚ 16 ರಿಂದ 20, ಸ್ಥಳ: ಯಕ್ಷಾಂಗಣ, ಗುಣವಂತೆ,
“ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ” ಹಾಗೂ “ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ” ಘೋಷಣೆ
“ಯಕ್ಷಗಾನ ಮೇರುನಟ (2004) ಕೆರೆಮನೆ ಶಿವರಾಮ ಹೆಗಡೆಯವರ ಹೆಸರಿನಲ್ಲಿ ಸ್ಥಾಪಿತವಾದ “ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ” ಈ ವರ್ಷ 2023 ರಲ್ಲಿ ಶತವಧಾನಿ ಡಾ. ಆರ್. ಗಣೇಶ್ ಇವರಿಗೆ ಫೋಷಣೆ.”
2022 ರ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಖ್ಯಾತ ಬಹುಮುಖ ವ್ಯಕ್ತಿತ್ವದ ಮೇರು ಸಾಧಕರು, ವಿದ್ವಾಂಸರು, ಚಿಂತಕರು, ಸಾಹಿತಿಗಳು ಹಾಗೂ ಉಪನ್ಯಾಸಕರು ಆದ ಶತವಧಾನಿ ಡಾ. ಆರ್. ಗಣೇಶ ಇವರಿಗೆ ನೀಡಲು ಮಂಡಳಿ ಹಾಗೂ ನಾಟ್ಯೋತ್ಸವ ಸಲಹಾ ಸಮಿತಿ ಮತ್ತು ಪ್ರಶಸ್ತಿ ಆಯ್ಕೆ ಸಮಿತಿ ನಿರ್ಧರಿಸಿದೆ. ಈ ಪ್ರಶಸ್ತಿ ರೂ. 25,000/-(ಇಪ್ಪತೈದು ಸಾವಿರ ರೂಪಾಯಿ ಮಾತ್ರ ) ಮೊತ್ತ, ಪ್ರಶಸ್ತಿ ಪತ್ರ ಮತ್ತು ಇತರ ಗೌರವಗಳನ್ನು ಒಳಗೊಂಡಿದೆ.
ಈ ಪ್ರಶಸ್ತಿ ಕಲೆ, ಸಂಸ್ಕøತಿ, ಸಾಹಿತ್ಯ ಹೀಗೆ ಸಕಲ ಕಲಾಕ್ಷೇತ್ರಕ್ಕೆ ವಿಸ್ತಾರಗೊಂಡಿದ್ದು, 2004 ರಲ್ಲಿ ಸ್ಥಾಪನೆಯಾಗಿ ಮೊದಲ ಪ್ರಶಸ್ತಿ ಗುರು ಡಾ. ಶ್ರೀಮತಿ ಮಾಯಾರಾವ್ ನಟರಾಜನ್, ಬೆಂಗಳೂರು (ಶಾಸ್ತ್ರೀಯ ನೃತ್ಯ)ಇವರಿಗೆ, ನಂತರ 2005 ರ ಪ್ರಶಸ್ತಿಯನ್ನು ಶ್ರೀ ನೆಬ್ಬೂರು ನಾರಾಯಣ ಭಾಗವತ (ಯಕ್ಷಗಾನ) ಇವರಿಗೆ, 2006 ರ ಪ್ರಶಸ್ತಿಯನ್ನು ಖ್ಯಾತ ರಂಗ ನಟ ಶ್ರೀ ಏಣಗಿ ಬಾಳಪ್ಪ ಇವರಿಗೆ,
2007 ರ ಪ್ರಶಸ್ತಿಯನ್ನು ಪದ್ಮವಿಭೂಷಣ ಡಾ. ಗಂಗೂಬಾಯಿ ಹಾನಗಲ್ (ಸಂಗೀತ), 2008 ರ ಪ್ರಶಸ್ತಿಯನ್ನು ಶ್ರೀ ಕೆ.ಎಸ್. ನಾರಾಯಣ ಆಚಾರ್ಯ, ಮೈಸೂರು (ಸಾಹಿತ್ಯ), 2009 ರ ಪ್ರಶಸ್ತಿಯನ್ನು ಶ್ರೀ ಹೊಸ್ತೋಟ ಮಂಜುನಾಥ ಭಾಗವತ ಸಿರಸಿ (ಯಕ್ಷಗಾನ), 2010 ರ ಪ್ರಶಸ್ತಿಯನ್ನು ಶ್ರೀ ಸಂತ ಭದ್ರಗಿರಿ ಅಚ್ಯುತ ದಾಸ, ಬೆಂಗಳೂರು,(ಹರಿಕಥಾ ವಿದ್ವಾಂಸರು), 2011 ರ ಪ್ರಶಸ್ತಿಯನ್ನು ಜ್ಷಾನಪೀಠ ಪ್ರಶಸ್ತಿ ಪುರಸ್ಕøತ ಡಾ. ಯು.ಆರ್. ಅನಂತಮೂರ್ತಿ,
ಬೆಂಗಳೂರು, 2012 ರ ಪ್ರಶಸ್ತಿಯನ್ನು ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಶ್ರೀ ಕೆ. ಗೋವಿಂದ ಭಟ್ಟ, 2013 ರ ಪ್ರಶಸ್ತಿಯನ್ನು ಬಡಗುತಿಟ್ಟಿನ ಯಕ್ಷಗಾನ ಕಲಾವಿದ ಪದ್ಮಶ್ರೀ ಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ, 2014 ರ ಪ್ರಶಸ್ತಿಯನ್ನು ಪದ್ಮಶ್ರೀ ಪುರಸ್ಕøತ ಶ್ರೀ ಸುರಭಿ ನಾಗೇಶ್ವರ ರಾವ್, ಹೈದ್ರಾಬಾದ್, 2015 ರ ಪ್ರಶಸ್ತಿಯನ್ನು ದೆಹಲಿಯ ‘ಸ್ಪಿಕ್ ಮೆಕೆ’ ಸಂಸ್ಥೆ, 2016 ರ ಪ್ರಶಸ್ತಿಯನ್ನು ಮೇಲಟ್ಟೂರಿನ ಕಲೈಮಾಮಣಿ ಎಸ್. ನಟರಾಜ, ತಮಿಳುನಾಡು ಹಾಗೂ 2017 ರ ಪ್ರಶಸ್ತಿಯನ್ನು ಕರ್ಕಿಯ ಹಾಸ್ಯಗಾರ ಮೇಳಕ್ಕೆ
2018 ರ ಪ್ರಶಸ್ತಿಯನ್ನು ನೀನಾಸಂ ಹೆಗ್ಗೋಡು ಸಂಸ್ಥೆ, 2019 ರ ಪ್ರಶಸ್ತಿಯನ್ನು ಪದ್ಮಭೂಷಣ ಡಾ. ಪದ್ಮಸುಬ್ರಹ್ಮಣ್ಯಂ, ಚೆನ್ನೈ, 2021 ರಲ್ಲಿ ಪದ್ಮಶ್ರೀ ಡಾ.ಬಿ.ಜಯಶ್ರೀ, ಹಾಗೂ 2023 ರ ಪ್ರಶಸ್ತಿಯನ್ನು ಖ್ಯಾತ ಚಲನಚಿತ್ರ ಮತ್ತು ರಂಗಭೂಮಿ ಕಲಾವಿದರು ಆದ ಶ್ರೀ ಅನಂತನಾಗ್ ಇವರು ಸ್ವೀಕರಿಸಿದ್ದಾರೆ.
2024 ಮಾರ್ಚ 16 ರಿಂದ 20ರ ವರೆಗೆ ಗುಣವಂತೆ ಯಕ್ಷಾಂಗಣದಲ್ಲಿ ನಡೆಯಲಿರುವ 5 ದಿನಗಳ ‘ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ’ದ ಸಂದರ್ಭದಲ್ಲಿ ದಿ : 16-03-2024 ರಂದು ಆಗಮಿಸುವ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ’
ಶ್ರೀ ಲಕ್ಷ್ಮೀನಾರಾಯಣ ಸಾಮಗ ಇವರಿಗೆ ‘ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ’ ಘೋಷಿಸಲಾಗಿದೆ. ಮಂಡಳಿಯ ಸರ್ವಸಮರ್ಥ ಯಕ್ಷಗಾನ ಕಲಾವಿದ ಖ್ಯಾತ ಸ್ತ್ರೀ ವೇಷಧಾರಿಯಾಗಿ ಮಿಂಚಿ ಮರೆಯಾದ, ಶ್ರೀ ಕೆರೆಮನೆ ಶಿವರಾಮ ಹೆಗಡೆಯವರ ಕಿರಿಯ ಪುತ್ರ ಶ್ರೀ ಕೆರೆಮನೆ ಗಜಾನನ ಹೆಗಡೆ ಇವರ ಹೆಸರಿನಲ್ಲಿ ಕಳೆದ 11 ವರುಷದಿಂದ (2012) ಯಕ್ಷಗಾನ ಕ್ಷೇತ್ರಕ್ಕೇ ಮೀಸಲಾದ ಪ್ರಶಸ್ತಿಯನ್ನು ಪ್ರಸಿದ್ಧ ಯಕ್ಷಗಾನದ ಚಿಂತಕರು, ವಿದ್ವಾಂಸರು, ಅರ್ಥದಾರಿಗಳು ಹಾಗೂ ಬರಹಗಾರರು ಆದ ಶ್ರೀ ಲಕ್ಷ್ಮೀನಾರಾಯಣ ಸಾಮಗ ಇವರಿಗೆ
ಘೋಷಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ.15,000/- (ಹದಿನೈದು ಸಾವಿರ ಮಾತ್ರ) ನಗದು, ಪ್ರಶಸ್ತಿ ಪತ್ರ, ಶಾಲು ಇತ್ಯಾದಿ ಗೌರವಗಳನ್ನು ಹೊಂದಿದೆ.
2012 ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಯನ್ನು ಮೊದಲು ಡಾ. ಕೊಳ್ಯೂರು ರಾಮಚಂದ್ರ ರಾವ್(2012), ಶ್ರೀ ಕುಂಜಾಲು ರಾಮಕೃಷ್ಣ ನಾಯಕ(2013), ಶ್ರೀ ಪ್ರಭಾಕರ ಭಂಡಾರಿ, ಕರ್ಕಿ(2014), ಶ್ರೀ ಪಾತಾಳ ವೆಂಕಟ್ರಮಣ ಭಟ್,ಉಪ್ಪಿನಂಗಡಿ(2015) ಶ್ರೀ ಗೋವಿಂದ ಶೇರಿಗಾರ ಮಾರ್ಗೋಳಿ(2016) ಹಾಗೂ ಶ್ರೀ ಗೋಡೆ ನಾರಾಯಣ ಹೆಗಡೆ (2017), ಶ್ರೀ ತಿಮ್ಮಣ್ಣ ಯಾಜಿ, ಮಣ್ಣಿಗೆ (2018), ಶ್ರೀ ಕೃಷ್ಣ ಯಾಜಿ ಮಾವಿನಕೆರೆ (2019), ಶ್ರೀ ಸುಬ್ರಾಯ ಭಾಗವತ ಕಪ್ಪೆಕೆರೆ, (2021) ಶ್ರೀ ತಿಮ್ಮಪ್ಪ ಹೆಗಡೆ ಶಿರಳಗಿ ಹಿರಿಯ ಯಕ್ಷಗಾನ ಕಲಾವಿದರು (2022) ರಲ್ಲಿ ಇವರಿಗೆ ನೀಡಲಾಗಿದೆ.
‘ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ’ದ ಎರಡನೇ ದಿನದ ಸಭಾ ಕಾರ್ಯಕ್ರಮದಲ್ಲಿ ದಿ : 17.03.2024 ರಂದು ಆಗಮಿಸುವ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions