ದಂಪತಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ
ಆಲಪ್ಪುಳ: ಇಲ್ಲಿನ ಕಾಯಂಕುಲಂನಲ್ಲಿರುವ ತಮ್ಮ ನಿವಾಸದಲ್ಲಿ ದಂಪತಿಗಳು ಶವವಾಗಿ ಪತ್ತೆಯಾಗಿದ್ದಾರೆ. ಕಾಯಂಕುಲಂ ಬಿಜೆಪಿ ಮಂಡಲಂ ಘಟಕದ ಕಾರ್ಯದರ್ಶಿ ಪಿಕೆ ಸಾಜಿ (48) ಮತ್ತು ಅವರ ಪತ್ನಿ ಬಿನು (42) ಮೃತರು.
ಕೊಯಮತ್ತೂರಿನಲ್ಲಿ ಓದುತ್ತಿದ್ದ ಅವರ ಮಗ ತನ್ನ ಅಪ್ಪ, ಅಮ್ಮನಿಗೆ ಪೋನ್ ಮಾಡಿದಾಗ ಕರೆ ಸ್ವೀಕರಿಸಿದೆ ಇದ್ದುದರಿಂದ ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಸಾಜಿ ಶುಕ್ರವಾರ ಪತ್ನಿಯನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರಿಗೂ ಕೌಟುಂಬಿಕ ಸಮಸ್ಯೆಗಳಿದ್ದವು ಎಂದು ಸ್ಥಳೀಯರು ಹೇಳುತ್ತಾರೆ.
ಕೂಡಲೇ ಮಗ ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿದಾಗ ಅವರು ಮನೆಗೆ ಬಂದು ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

