ಬಿಎಂಟಿಸಿ ಬಸ್ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
ಬೆಂಗಳೂರಿನಲ್ಲಿ ಸ್ಕೂಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ
ಶುಕ್ರವಾರ ಮಲ್ಲೇಶ್ವರಂ ಬಳಿಯ ಹರಿಶ್ಚಂದ್ರ ಘಾಟ್ ಬಳಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಅಪಘಾತಕ್ಕೀಡಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನು ಮಲ್ಲೇಶ್ವರಂ ನಿವಾಸಿ ಕುಸುಮಿತಾ (21) ಎಂದು ಗುರುತಿಸಲಾಗಿದ್ದು, ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ.

ಕುಸುಮಿತಾ ತನ್ನ ಸ್ಕೂಟರ್ ಮೂಲಕ ಶುಕ್ರವಾರ ಬೆಳಗ್ಗೆ ಮೆಟ್ರೋ ನಿಲ್ದಾಣಕ್ಕೆ ಬರುತ್ತಿದ್ದಾಗ ಬಿಎಂಟಿಸಿ ಬಸ್ ಆಕೆಯ ಸ್ಕೂಟರ್ ನ್ನು ಬೀಳಿಸಿದ್ದು, ನಂತರ ಆಕೆ ಬಿದ್ದು ಬಸ್‌ನ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾಳೆ. ಆಕೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಕೆಯನ್ನು “ಮೃತಳಾಗಿದ್ದಾಳೆ” ಎಂದು ಘೋಷಿಸಲಾಯಿತು.
ಅಪಘಾತಕ್ಕೆ ಬಿಎಂಟಿಸಿ ಬಸ್ ಚಾಲಕನೇ ಕಾರಣ ಎಂದು ಆರೋಪಿಸಿ ದಾರಿಹೋಕರು ಏಕಾಏಕಿ ಪ್ರತಿಭಟನೆ ನಡೆಸಿದರು.,
ಈ ನಡುವೆ ಮಲ್ಲೇಶ್ವರಂ ಸಂಚಾರಿ ಪೊಲೀಸರು ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಪಡಿಸಿಕೊಂಡಿದ್ದಾರೆ.