ನವ ವಿವಾಹಿತೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪುತ್ತೂರು ಸಮೀಪದ ಕುರಿಯ ಎಂಬಲ್ಲಿ ಈ ಘಟನೆ ನಡೆದಿದೆ. ಗಡಾಜೆಯ ನವವಿವಾಹಿತೆಯಾದ ಶೋಭಾ (26 ವರ್ಷ) ಎಂಬ ಯುವತಿ ತನ್ನ ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶೋಭಾ ಅವರು ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ ದಂಪತಿಗಳ ಪುತ್ರಿ. ಹಗಲು ಹೊತ್ತಿನಲ್ಲಿ ಗಂಡನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶೋಭಾ ಅವರಮ್ನ ಎರಡು ತಿಂಗಳ ಹಿಂದೆ ಪುತ್ತೂರು ಸಮೀಪದ ಕುರಿಯದ ಗಡಾಜೆಯಲ್ಲಿರುವ ರೋಹಿತ್ ಎಂಬವರಿಗೆ ವಿವಾಹ ಮಾಡಿ ಕೊಡಲಾಗಿತ್ತು.
ಸಾವಿಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
(“ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಯಾವುದೇ ಮಾನಸಿಕ ಸಮಸ್ಯೆಗಳನ್ನು ಪರಿಹರಿಸಲು ನುರಿತ ಮಾನಸಿಕ ತಜ್ಞರನ್ನು ಭೇಟಿಯಾಗಿ ತೊಂದರೆಗಳನ್ನು ನಿವಾರಿಸಿಕೊಳ್ಳಿ”)