ಬೆಳ್ತಂಗಡಿ ತಾಲೂಕಿನ ಕಾಯರ್ತಡ್ಕದ ನಿವಾಸಿ ಅವಿವಾಹಿತ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಾಲೂಕಿನ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ (ರೇವತಿ) ಅವರು ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾರೆ. ಇವರು ತಮ್ಮ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈಕೆ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ವನಿತಾ ಇತ್ತೀಚೆಗೆ ಒಂದು ತಿಂಗಳ ಮೊದಲು ಅನಾರೋಗ್ಯದ ಕಾರಣದಿಂದಾಗಿ ಕೆಲಸಕ್ಕೆ ರಜೆ ಬರೆದು ಮನೆಗೆ ಬಂದಿದ್ದರು.
ಮೃತ ಯುವತಿ ವನಿತಾ, ತನ್ನ ತಂದೆ ಹೊನ್ನಪ್ಪ ಗೌಡ, ತಾಯಿ ವಾರಿಜಾ ಮತ್ತು ಸಹೋದರರಾದ ಜನಾರ್ದನ ಗೌಡ, ಪದ್ಮನಾಭ ಗೌಡರನ್ನು ಅಗಲಿದ್ದಾರೆ.
ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.