ಪತಿಯೇ ತನ್ನ ಪತ್ನಿಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆಯಲ್ಲಿ ಮಹಿಳೆಯೊಬ್ಬರು ಕೆಲವೇ ಗಂಟೆಗಳಲ್ಲಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.
ಪಟ್ಟಣಕ್ಕಾಡ್ ಮೂಲದ ಆರತಿ (32) ಮೃತ ದುರ್ದೈವಿ. ಆರತಿಯ ಪತಿ ಶ್ಯಾಮಜಿತ್(42) ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 9:50ರ ಸುಮಾರಿಗೆ ಚೇರ್ತಲ ಆಸ್ಪತ್ರೆ ಬಳಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಶ್ಯಾಮಜಿತ್ ತನ್ನ ಪತ್ನಿ ಆರತಿಗೆ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಶ್ಯಾಮಜಿತ್ ಕೂಡ ಸುಟ್ಟ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರತಿ ಆವರು ಖಾಸಗಿ ಹಣಕಾಸು ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದು, ಸೋಮವಾರ ಬೆಳಗ್ಗೆ ತನ್ನ ಸ್ಕೂಟರ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಶ್ಯಾಮಜಿತ್ ದಾಳಿ ನಡೆಸಿದ್ದಾನೆ. ದಂಪತಿಗಳು ದೀರ್ಘಕಾಲದವರೆಗೆ ಬೇರೆ ಬೇರೆಯಾಗಿ ವಾಸವಾಗಿದ್ದರು ಮತ್ತು ವಿರಸಗಳನ್ನು ಹೊಂದಿದ್ದರು,
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.