ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕವನ್ನು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಚುನಾವಣಾ ಆಯೋಗವು ಪ್ರಕಟಿಸಲಿದೆ.
ಭಾರತೀಯ ಚುನಾವಣಾ ಆಯೋಗವು (ಇಸಿಐ) ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ದಿನಾಂಕವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಿದೆ.
ಇಸಿಐ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನೂ ಪ್ರಕಟಿಸಲಿದೆ.
ಏಳರಿಂದ ಎಂಟು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹೊಸದಾಗಿ ಚುನಾಯಿತ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಿದ್ದಾರೆ.
ಪತ್ರಿಕಾಗೋಷ್ಠಿಯನ್ನು ನೇರಪ್ರಸಾರ ಮಾಡಲಾಗುವುದು.