Sunday, October 6, 2024
Homeಸುದ್ದಿಏಪ್ರಿಲ್ 19 ರಿಂದ ಜೂನ್ 1 ರವರೆಗೆ ಲೋಕಸಭೆ ಚುನಾವಣೆ, ಜೂನ್ 4 ರಂದು ಫಲಿತಾಂಶ...

ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಲೋಕಸಭೆ ಚುನಾವಣೆ, ಜೂನ್ 4 ರಂದು ಫಲಿತಾಂಶ – ಕರ್ನಾಟಕದಲ್ಲಿ ಎಪ್ರಿಲ್ 26 ಮತ್ತು ಮೇ 7ರಂದು ಮತದಾನ


ಭಾರತೀಯ ಚುನಾವಣಾ ಆಯೋಗ ಶನಿವಾರ ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

2024 ರ ಲೋಕಸಭಾ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದರೊಂದಿಗೆ ಇದೀಗ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ಕರ್ನಾಟಕದಲ್ಲಿ ಮೊದಲನೇ ಹಂತದಲ್ಲಿ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದೆ.

ಎಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ (ಎಸ್‌ಸಿ), ಕಲಬುರಗಿ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್‌, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ಏಪ್ರಿಲ್ 19 ರಂದು ಮೊದಲ ಹಂತ, ಏಪ್ರಿಲ್ 26 ರಂದು ಎರಡನೇ ಹಂತ, ಮೇ 7 ರಂದು ಮೂರನೇ ಹಂತ, ಮೇ 13 ರಂದು ನಾಲ್ಕನೇ ಹಂತ, ಮೇ 20 ರಂದು ಐದನೇ ಹಂತ, ಮೇ 25 ರಂದು ಆರನೇ ಹಂತ ಮತ್ತು ಜೂನ್ 1 ರಂದು ಏಳನೇ ಹಂತಕ್ಕೆ ಮತದಾನ ನಡೆಯಲಿದೆ. .
ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಪ್ರಕಟಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಮೇ 13 ರಂದು, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಏಪ್ರಿಲ್ 19 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಡಿಶಾದಲ್ಲಿ ಮೇ 13 ಮತ್ತು ಮೇ 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ ಜತೆಗೆ 26 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ.

ಸುಮಾರು 96.8 ಕೋಟಿ ಜನರು ಮುಂಬರುವ ಚುನಾವಣೆಯಲ್ಲಿ 12 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments