Saturday, January 18, 2025
Homeಸುದ್ದಿಕೊಂಡದಕುಳಿ ರಾಮಚಂದ್ರ ಹೆಗಡೆಯವರಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ.

ಕೊಂಡದಕುಳಿ ರಾಮಚಂದ್ರ ಹೆಗಡೆಯವರಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ.

ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ಬಡಗುತಿಟ್ಟಿನ ಶ್ರೇಷ್ಠ ಕಲಾವಿದರಾದ ಶ್ರೀ ಕೊಂಡದಕುಳಿ ರಾಮಚಂದ್ರ ಹೆಗಡೆ ಆಯ್ಕೆಯಾಗಿದ್ದಾರೆ.

ಬಡಗುತಿಟ್ಟಿನ ಪರಂಪರೆಯ ಪ್ರಾತಿನಿಧಿಕ ವೇಷಧಾರಿಯಾಗಿರುವ ಇವರು ಗುಂಡುಬಾಳ, ಪಂಚಲಿಂಗ, ಸಾಲಿಗ್ರಾಮ ಮೇಳಗಳಲ್ಲಿ ಕಲಾಸೇವೆಗೈದಿರುತ್ತಾರೆ. ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ ಸ್ವಂತ ಮೇಳ ಸ್ಥಾಪಿಸಿ, ಕಾಲಮಿತಿಯ ಪ್ರದರ್ಶನಗಳನ್ನು ನೀಡುತ್ತಾ ಬಂದಿರುತ್ತಾರೆ.

ನಾಲ್ಕೂವರೆ ದಶಕಗಳ ಕಲಾಜೀವನದಲ್ಲಿ ಹಲವು ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿ, ಯಕ್ಷಗಾನ ಕಲಾಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿರುತ್ತಾರೆ.

ಏಪ್ರಿಲ್ 23, 2024 ಮಂಗಳವಾರ ಪೂರ್ವಾಹ್ನ 10.30 ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ವನ್ನು ಪ್ರಶಸ್ತಿ ಫಲಕ ಮತ್ತು ರೂ. 50,000/- ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments