ದಿನಾಂಕ 07.04.2024 ಆದಿತ್ಯವಾರದಂದು, ಎಂ.ಜಿ.ಎಂ ಕಾಲೇಜು ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಕೇಂದ್ರ, ಇಂದ್ರಾಳಿ, ಉಡುಪಿ (ಮಾಹೆ),ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ, ಮಾಹೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಇವರ ಜಂಟಿ ಆಶ್ರಯದಲ್ಲಿ ಬಡಗುತಿಟ್ಟು ಯಕ್ಷಗಾನ ಭಾಗವತಿಕೆ ವಿವಿಧ ಶೈಲಿ-ಮಟ್ಟುಗಳ ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಹೆ ಸಹಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ ನೆರವೇರಿಸಲಿರುವರು,
ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆಯನ್ನು ವಹಿಸಲಿರುವರು.
ಶ್ರೀ ಭುವನೇಂದ್ರ ಕಾಲೇಜು, ಆಡಳಿತ ಮಂಡಳಿ, ಅಧ್ಯಕ್ಷರಾದ ಶ್ರೀ ಸಿ.ಎ ಶಿವಾನಂದ ಪೈ, ಹಿರಿಯ ಭಾಗವತರಾದ ಹೆರಂಜಾಲು ಗೋಪಾಲ ಗಾಣ ಗ ಉಪಸ್ಥಿತರಿವರು.
ಯಕ್ಷಗಾನ ಕೇಂದ್ರದ ಸಲಹಾಸಮಿತಿ ಸದಸ್ಯರಾದ ಪ್ರೊ. ಎಸ್.ವಿ. ಉದಯಕುಮಾರ್ ಶೆಟ್ಟಿ ಕಾರ್ಯಕ್ರಮದ ಸಂಯೋಜಕರಾಗಿರುವರು.