Saturday, January 18, 2025
Homeಸುದ್ದಿಕೊಂಡದಕುಳಿ ರಾಮಚಂದ್ರ ಹೆಗಡೆಯವರಿಗೆ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿ ಪ್ರದಾನ

ಕೊಂಡದಕುಳಿ ರಾಮಚಂದ್ರ ಹೆಗಡೆಯವರಿಗೆ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿ ಪ್ರದಾನ

ಕೊಂಡದಕುಳಿ ಅವರಿಗೆ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿ ಪ್ರದಾನ.

ಇಂದು (23.04.2024) ಪಲಿಮಾರಿನಲ್ಲಿ ನಡೆದ ಹನುಮ ಜಯಂತಿಯ ಸಂದರ್ಭದಲ್ಲಿ ಪಲಿಮಾರು ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಮ್ಮ ಗುರುಗಳಾದ ಶ್ರೀ ವಿದ್ಯಾಮಾನ್ಯ ಶ್ರೀಪಾದರ ಹೆಸರಿನಲ್ಲಿ ಪ್ರತೀವರ್ಷ ಕೊಡಮಾಡುವ ‘ಯಕ್ಷ ವಿದ್ಯಾಮಾನ್ಯ’ ಪ್ರಶಸ್ತಿಯನ್ನು ಬಡಗುತಿಟ್ಟಿನ ಶ್ರೇಷ್ಠ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರಿಗೆ ಪ್ರದಾನ ಮಾಡಿದರು.

ಈ ಪ್ರಶಸ್ತಿನ 50,000/- ನಗದು ಪುರಸ್ಕಾರಗಳನ್ನೊಳಗೊಂಡಿದೆ. ಶ್ರೀ ಕಾಣ ಯೂರು, ಶ್ರೀ ಸೋದೆ, ಶ್ರೀ ಭೀಮನಕಟ್ಟೆ ಹಾಗೂ ಪಲಿಮಾರು ಕಿರಿಯ ಶ್ರೀಪಾದಂಗಳವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪಲಿಮಾರು ಶ್ರೀಗಳು ಎರಡು ದಶಕಗಳ ಹಿಂದೆ ಕೊಂಡದಕುಳಿಯವರು ನಿರ್ವಹಿಸಿದ ಹನುಮಂತನ ಪಾತ್ರ ಇಂದಿಗೂ ನನ್ನ ಮನಸ್ಸಿನಲ್ಲಿ ಹಸಿರಾಗಿದೆ. ಇಂತಹ ಶ್ರೇಷ್ಠ ಕಲಾವಿದ ಇನ್ನಷ್ಟು ಸಮಯ ರಂಗದಲ್ಲಿ ಪಾತ್ರನಿರ್ವಹಿಸುವಂತಾಗಲಿ ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.

ಪ್ರಶಸ್ತಿ ಸ್ವೀಕರಿಸಿದ ಕೊಂಡದಕುಳಿಯವರು ಈ ದಿನ ನನ್ನ ಪಾಲಿಗೆ ಸಂತಸದ ಕ್ಷಣ, ಕಲಾವಿದನಾದವನು ಅಧ್ಯಯನಶೀಲನಾಗಿರಬೇಕು. ಕಲಾವಿದರು ತಪಸ್ವಿಗಳು ಎಂದು ಪೇಜಾವರ ವಿಶ್ವೇಶ ತೀರ್ಥರು ಹೇಳಿದ ಮಾತನ್ನು ನೆನಪಿಸಿಕೊಂಡರು.

ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅಭಿನಂದನೆಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಕೊಂಡದಕುಳಿಯವರ ಪತ್ನಿ ಚೇತನಾ ಹೆಗಡೆ, ಯಕ್ಷಗಾನ ಕಲಾರಂಗದ ಅದ್ಯಕ್ಷ ಎಂ. ಗಂಗಾಧರ ರಾವ್, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments