ಕಾಸರಗೋಡಿನಲ್ಲಿ ಆಂಬ್ಯುಲೆನ್ಸ್ ಕಾರು ಡಿಕ್ಕಿಯಾಗಿ ವ್ಯಕ್ತಿ ಹಾಗೂ ಆತನ ಇಬ್ಬರು ಪುತ್ರರ ದುರ್ಮರಣ
ಆಂಬ್ಯುಲೆನ್ಸ್ ಮತ್ತು ಕಾರು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಹಾಗೂ ಆತನ ಇಬ್ಬರು ಪುತ್ರರು ಸಾವನ್ನಪ್ಪಿರುವ ಘಟನೆ ಮಂಜೇಶ್ವರದ ಕುಂಜತ್ತೂರಿನಲ್ಲಿ ನಡೆದಿದೆ.

ಮೃತರನ್ನು ತ್ರಿಶೂರ್‌ನ ಇರಿಂಜಲಕುಡದ ಶಿವಕುಮಾರ್ (54) ಮತ್ತು ಅವರ ಮಕ್ಕಳಾದ ಶರತ್ (23) ಮತ್ತು ಸೌರವ್ (15) ಎಂದು ಗುರುತಿಸಲಾಗಿದೆ.
ಅವರು ಕಾರಿನಲ್ಲಿದ್ದ ಪ್ರಯಾಣಿಕರಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಸರಗೋಡಿನಿಂದ ಮಂಗಳೂರಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್ ಕಾಸರಗೋಡಿಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಕಾರಿನ ಬಾಗಿಲು ಒಡೆದು ಶವಗಳನ್ನು ಹೊರತೆಗೆಯಲಾಯಿತು. ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿಯಾದ ಉಷಾ, ಆಕೆಯ ಜೊತೆಗಿದ್ದ ಶಿವದಾಸ್ ಮತ್ತು ಆಂಬ್ಯುಲೆನ್ಸ್ ಚಾಲಕನಿಗೆ ಗಾಯಗಳಾಗಿವೆ.
ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.