Friday, November 22, 2024
Homeಸುದ್ದಿಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ

ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ

ತೆಂಕು ಮತ್ತು ಬಡಗು ತಿಟ್ಟುಗಳ ಮೇಳಗಳಲ್ಲಿ 47 ವರ್ಷಗಳ ತಿರುಗಾಟ ಮಾಡಿದ ಅಪೂರ್ವ ಸ್ತ್ರೀ ವೇಷದಾರಿ ಅಂಬಾಪ್ರಸಾದ್ ಪಾತಾಳ ಇವರಿಗೆ 60ರ ಅಭಿನಂದನ ಕಾರ್ಯಕ್ರಮವು ಪಾತಾಳ ಪೂರ್ಣ ಶ್ರೀ ನಿಲಯದಲ್ಲಿ ಜರಗಿತು.

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ ಶೆಣೈ ಮತ್ತು ಗುರಿಕಾರ ಸತ್ಯನಾರಾಯಣ ಭಟ್ ಆರ್ಲ, ನಿವೃತ್ತ ಮುಖ್ಯ ಗುರುಗಳಾದ ಬಿ. ಸುಬ್ರಹ್ಮಣ್ಯರಾವ್ ಇವರು ಪಾತಾಳ ಅಂಬಾಪ್ರಸಾದ್ ಮತ್ತು ಶ್ರೀಮತಿ ಜಯಂತಿ ಪ್ರಸಾದ್ ಪಾತಾಳ ಇವರನ್ನು ಸನ್ಮಾನಿಸಿದರು.

ದಿವಾಕರ ಆಚಾರ್ಯ ಗೇರುಕಟ್ಟೆ ಅಭಿನಂದನ ನುಡಿಗಳನ್ನಾಡಿದರು.

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷರಾದ ದಿವಾಕರ ಆಚಾರ್ಯರನ್ನು ಪಾತಾಳ ಅಂಬಾ ಪ್ರಸಾದರು ಗೌರವಿಸಿ ಶ್ರೀಕಾಳಿಕಾಂಬ ಯಕ್ಷಗಾನ ಸಂಘಕ್ಕೆ ಆರ್ಥಿಕ ನೆರವನ್ನು ಹಸ್ತಾಂತರಿಸಿದರು.

ಆರಂಭದಲ್ಲಿ ಜರಗಿದ ಶಾಂಭವಿ ವಿಲಾಸ ತಾಳಮದ್ದಳೆಯನ್ನು ನಿವೃತ್ತ ಉಪನ್ಯಾಸಕ ಮಹಾಲಿಂಗೇಶ್ವರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ ಉಪಸ್ಥಿತರಿದ್ದರು. ಭಾಗವಹಿಸಿದ ಕಲಾವಿದರನ್ನು ಪಾತಾಳ ಅಂಬಾ ಪ್ರಸಾದ್ ಸ್ಮರಣಿಕೆಯೊಂದಿಗೆ ಗೌರವಿಸಿದರು.

ಭಾಗವತರಾಗಿ ವಿಘ್ನೇಶ್ವರ ಭಟ್ ನೂಜಿ , ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್ ಇಳಂತಿಲ ಹಿಮ್ಮೇಳದಲ್ಲಿ ಅಚ್ಯುತ ಪಾಂಗಣ್ಣಾಯ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ ಚಕ್ರತಾಳದಲ್ಲಿ ರಮೇಶ್ ಭಟ್ ಕಜೆ ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್ (ಕೌಶಿಕೆ) ಸತೀಶ್ ಆಚಾರ್ಯ ಮಾಣಿ(ರಕ್ತ ಬೀಜ)ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ಚಂಡ), ಗುಡ್ಡಪ್ಪ ಬಲ್ಯ (ಶುಂಭ) ,ಜಯರಾಮ ನಾಲ್ಗುತ್ತು(ಮುಂಡ),ಸಂಜೀವ ಪಾರೆಂಕಿ(ಸುಗ್ರೀವ ಮತ್ತು ದೇವೇಂದ್ರ )ಶ್ರೀಮತಿ ಶ್ರುತಿ ವಿಸ್ಮಿತ್ (ಧೂಮ್ರಾಕ್ಷ) ಭಾಗವಹಿಸಿದ್ದರು.

ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ ಸ್ವಾಗತಿಸಿ ಗುಡ್ಡಪ್ಪ ಬಲ್ಯ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಯರಾದ ಕೆ ಶ್ರೀಧರ್ ಭಟ್ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments