ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ (75) ನಿನ್ನೆ(9-7-2024)ರಾತ್ರಿ ಹೊನ್ನಾವರದಲ್ಲಿ ನಿಧನರಾದರು.
ಅವರು ಪತ್ನಿ ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆಯವರಲ್ಲಿ ಯಕ್ಷಗಾನ ಕಲಿತು, ಕೆರೆಮನೆ ಮಹಾಬಲ ಹೆಗಡೆಯವರ ಗರಡಿಯಲ್ಲಿ ಶ್ರೇಷ್ಠ ಕಲಾವಿದರಾಗಿ ರೂಪುಗೊಂಡಿದ್ದರು.

ಗುಂಡುಬಾಳ, ಇಡಗುಂಜಿ, ಬಚ್ಚಗಾರು, ಶಿರಸಿ,ಪಂಚಲಿಂಗ, ಮಂದಾರ್ತಿ ಮೇಳಗಳಲ್ಲಿ ಐದು ದಶಕಗಳ ಕಲಾ ಸೇವೆ ಗೈದಿದ್ದರು. ಶಿರಸಿ ಮೇಳದಲ್ಲಿ ವ್ಯವಸ್ಥಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಖಳ ಮತ್ತು ಸಾತ್ವಿಕ ಎರಡೂ ರೀತಿಯ ಪಾತ್ರಗಳನ್ನೂ ಸಮರ್ಥವಾಗಿ ಪ್ರಸ್ತುತ ಪಡಿಸುತ್ತಾ ಕಲಾಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ, ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಸರಳ ಸಜ್ಜನಿಕೆಯ ಕಲಾವಿದರು ಎಂದೇ ಮಾನಿತರಾಗಿದ್ದ ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

