ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ರವಿಶಂಕರ್ ವಳಕ್ಕುಂಜ ಅವರ ಆರನೆಯ ಕೃತಿ ‘ಯಕ್ಷಗಾನ ವಾಚಿಕ ಸಮಾರಾಧನೆ ಭಾಗ – 2’ ಆಗಸ್ಟ್ 23ಕ್ಕೆ ಎಡನೀರು ಮಠದಲ್ಲಿ ಬಿಡುಗಡೆಗೊಳ್ಳಲಿದೆ.

ಶ್ರೀ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳ ಚತುರ್ಥ ಚಾತುರ್ಮಾಸ್ಯದ ಅಂಗವಾಗಿ ಹಮ್ಮಿಕೊಂಡ ವಿವಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದಿನಾಂಕ. 23.08.2024ನೇ ಶುಕ್ರವಾರ ಅಪರಾಹ್ನ 3 ಗಂಟೆಗೆ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಅನಂತರ ಖ್ಯಾತ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. ವಿವರಗಳಿಗೆ ಚಿತ್ರವನ್ನು ನೋಡಿ.
ರವಿಶಂಕರ್ ವಳಕ್ಕುಂಜ ಅವರ ಮೊದಲ ಐದು ಕೃತಿಗಳು.
1. ಯಕ್ಷಗಾನ ವಾಚಿಕ ಸಮಾರಾಧನೆ
- ಯಕ್ಷಗಾನ ಪ್ರಸಂಗ ದೃಶ್ಯಾವಳೀ
- ಯಕ್ಷಪಾತ್ರದೀಪಿಕಾ
- ಯಕ್ಷಗಾನ ಪ್ರಸಂಗ ದೃಶ್ಯಾವಳೀ – ಭಾಗ ೨
- ಯಕ್ಷಗಾನ ಪ್ರಸಂಗಗಳಲ್ಲಿ ನಾರದ