ಕಾಲೇಜು ಜೀವನದಲ್ಲಿ ವೈವಿಧ್ಯಮಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಗತ್ಯ. ಚಟುವಟಿಕೆಗಳು ನಮ್ಮಲ್ಲಿ ಧೈರ್ಯ ಹುಮ್ಮಸ್ಸುಗಳನ್ನು ತುಂಬುತ್ತವೆ. ಹೊಸ ಆಲೋಚನೆಗಳನ್ನು ಹುಟ್ಟುಹಾಕುವಲ್ಲಿ ಸಹಕರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಚಟುವಟಿಕೆಗಳಲ್ಲಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ ಎ.ಆರ್. ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯದ ಜತೆಜತೆಗೆ ಪಠ್ಯೇತರ ಚಟುವಟಿಕೆಗಳೂ ಮುನ್ನಡೆಯಬೇಕು. ಅಂತಹ ಚಟುವಟಿಕೆಗಳಿಲ್ಲದ ಶಿಕ್ಷಣ ಶುಷ್ಕವೆನಿಸುತ್ತದೆ. ಪಠ್ಯಗಳು ಕೇವಲ ಪದವಿ ನೀಡಬಹುದು. ಆದರೆ ಪಠ್ಯದ ಹೊರತಾದ ಸಂಗತಿಗಳು ನಮಗೆ ವ್ಯಕ್ತಿತ್ವ ನೀಡುತ್ತವೆ. ಹಾಗಾಗಿ ಅವುಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಅಗತ್ಯ ಎಂದರು.
ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅನನ್ಯಾ ವಿ., ವಾಣಿಜ್ಯ ಉಪನ್ಯಾಸಕಿ ಶ್ರೀಕೀರ್ತನಾ, ಇಂಗ್ಲಿಷ್ ವಿಭಾಗ ಮುಖ್ಯಸ್ಥ ಗಣೇಶ ಪ್ರಸಾದ್ ಎ, ಸಂಸ್ಕೃತ ವಿಭಾಗ ಮುಖ್ಯಸ್ಥೆ ಶಶಿಕಲಾ ವರ್ಕಾಡಿ, ಕನ್ನಡ ವಿಭಾಗ ಮುಖ್ಯಸ್ಥೆ ಜಯಂತಿ ಪಿ, ಕನ್ನಡ ಉಪನ್ಯಾಸಕ ಗಿರೀಶ ಭಟ್ ಕುವೆತ್ತಂಡ, ಪತ್ರಿಕೋದ್ಯಮ ಉಪನ್ಯಾಸಕ ಹರ್ಷಿತ್ ಪಿಂಡಿವನ ಉಪಸ್ಥಿತರಿದ್ದರು.
ವಾಣಿಜ್ಯ ಸಂಘದ ಕಾರ್ಯದರ್ಶಿ ಪ್ರಿಯಾಲ್ ಆಳ್ವಾ ವಾರ್ಷಿಕ ವರದಿಯನ್ನು ಪ್ರಸ್ತುತಪಡಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಪ್ರಾರ್ಥಿಸಿದರು.
ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಸಾಕೇತ್ ಸ್ವಾಗತಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಶರಣ್ಯಾ ರೈ ವಂದಿಸಿದರು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions