ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಗೆ ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಸಂಸ್ಥೆಯ ಆಯ್ಕೆ.
ಉಡುಪಿ : ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ, ರಜತ ಪರ್ವದ ಶುಭಾವಸರದಲ್ಲಿರುವ ಯಶಸ್ವೀ ಕಲಾವೃಂದ (ರಿ) ಕೊಮೆ, ತೆಕ್ಕಟ್ಟೆ ಸಂಸ್ಥೆಯು, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ.
ಯಕ್ಷಗಾನ ಕಲಾರಂಗದ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000/- ರೂಪಾಯಿಗೆ ವೃದ್ಧಿಸಲಾಗಿದೆ.
ಆರಂಭದಿಂದಲೂ ನಗದು ಪುರಸ್ಕಾರದ ಅರ್ಧಾಂಶವನ್ನು ಶ್ರೀಮಠ ಬರಿಸುತ್ತಾ ಬಂದಿದೆ. ಪ್ರಶಸ್ತಿ ಪ್ರದಾನ ನವೆಂಬರ್ 17, 2024 ಭಾನುವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‌ನಲ್ಲಿ ಜರಗಲಿದೆ.
ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions