ಸರ್ಪಂಗಳ ಸ್ಮಾರಕ ಪ್ರಶಸ್ತಿ ಪ್ರದಾನ.
ಉಡುಪಿ:ಜೀವ ವಿಮಾ ಅಧಿಕಾರಿಗಳಾಗಿ ನಿವೃತ್ತರಾಗಿದ್ದ,ಕಲಾಪ್ರೇಮಿ ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮರಣೆಯಲ್ಲಿ ಪ್ರತೀ ವರ್ಷ ಆಯೋಜಿಸುತ್ತಾ ಬಂದ ಸರ್ಪಂಗಳ ಯಕ್ಷೋತ್ಸವ,ಅಕ್ಟೋಬರ್ 27, ಭಾನುವಾರ ಯಕ್ಷಗಾನ ಕಲಾರಂಗದ ಐ.ವೈ.ಸಿ.ಸಭಾಂಗಣದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಇವರನ್ನು ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚೌಕಿ ಸಹಾಯಕರಾಗಿ ಐದು ದಶಕ ಸೇವೆ ಸಲ್ಲಿಸಿದ ಕಾಟುಕುಕ್ಕೆ ಗೋವಿಂದ ನಾಯ್ಕ ಇವರಿಗೆ ಸರ್ಪಂಗಳ ಕಲಾ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಈರ್ವರನ್ನು ಸನ್ಮಾನಿಸಿದರು.ಕಾರ್ಯಕ್ರಮದ ಪ್ರಾಯೋಕರಾದ ಡಾ. ನರೇಂದ್ರ ಶೆಣೈ, ಮತ್ತು ಡಾ.ಶೈಲಜಾ ಭಟ್ ಉಪಸ್ಥಿತರಿದ್ದರು.
ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ನಿರ್ವಹಿಸಿದ್ದರು. ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಕನಕಾಂಗಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು.
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ
- ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿ ಪ್ರದಾನ – ಭೀಷ್ಮ ವಿಜಯ ತಾಳಮದ್ದಳೆ