ತನ್ನ ಮಗಳ ಜೊತೆಗಿನ ಯುವಕನ ಸಂಬಂಧ ಕೊನೆಗೊಳಿಸಲು ಮಗಳನ್ನು ಅಮೆರಿಕಕ್ಕೆ ಕಳುಹಿಸಿದ ತಂದೆಯನ್ನು ಕೊಲ್ಲಲು ಯತ್ನಿಸಿದ ಆ ಯುವಕನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ 25 ವರ್ಷದ ಬಲ್ವಿಂದರ್ ಸಿಂಗ್.
“ತಮ್ಮ ಸಂಬಂಧವನ್ನು ಮುರಿಯಲು” ತನ್ನ ಮಗಳನ್ನು ಯುಎಸ್‌ಗೆ ಕಳುಹಿಸಿದ ನಂತರ ತನ್ನ ಗೆಳತಿಯ ತಂದೆಗೆ ಗುಂಡು ಹಾರಿಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ರೇವಂತ್ ಆನಂದ್ (57) ಮೇಲೆ ಬಲ್ವಿಂದರ್ ಸಿಂಗ್ ಏರ್ ಗನ್ ನಿಂದ ಗುಂಡು ಹಾರಿಸಿದ್ದಾರೆ. 57 ವರ್ಷದ ಅವರು ತಮ್ಮ ಕಾರಿನೊಳಗೆ ಕುಳಿತಿದ್ದಾಗ ಈ ಘಟನೆ ನಡೆದಿದೆ. ತನ್ನ ಮಗಳ ಹಾಗೂ ಯುವಕ ಬಲ್ವಿಂದರ್ ಸಿಂಗ್ ಪ್ರೇಮ ಸಂಬಂಧವನ್ನು ಮುರಿಯಲು ರೇವಂತ್ ಆನಂದ್ ಅವರು ತಮ್ಮ ಮಗಳನ್ನು ಯುಎಸ್‌ಗೆ ಕಳುಹಿಸಿದ್ದರು.
ಆರೋಪಿಯನ್ನು ಬಲ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ವ್ಯಕ್ತಿಯ ಮಗಳ ಸಹಪಾಠಿಯಾಗಿದ್ದು, ಏರ್‌ಗನ್‌ನಿಂದ ಒಂದು ಸುತ್ತು ಗುಂಡು ಹಾರಿಸಿದ್ದು ರೇವಂತ್ ಅವರ ಬಲಗಣ್ಣಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನಂದ್ ಅವರ 23 ವರ್ಷದ ಮಗಳೊಂದಿಗೆ ಬಲ್ವಿಂದರ್ ಸಂಬಂಧ ಹೊಂದಿದ್ದರು. ಸಂಬಂಧ ಮುಂದುವರಿಸದಂತೆ ಆನಂದ್ ಬಲ್ವಿಂದರ್ ಗೆ ಎಚ್ಚರಿಕೆ ನೀಡಿದ್ದರು. ಇಬ್ಬರೂ ತಮ್ಮ ಸಂಬಂಧವನ್ನು ಮುಂದುವರಿಸಿದ ನಂತರ ಅವರು ತಮ್ಮ ಮಗಳನ್ನು ಯುಎಸ್‌ಗೆ ಕಳುಹಿಸಿದರು.
ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಸಿಟ್ಟಿನ ಭರದಲ್ಲಿ ಬಲ್ವಿಂದರ್ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡು ಕಣ್ಣಿಗೆ ತಗುಲಿದ್ದು, ಆನಂದ್ ತೀವ್ರವಾಗಿ ಗಾಯಗೊಂಡಿದ್ದಾರೆ. ಬಲ್ವಿಂದರ್ ಕಟ್ಟಡಕ್ಕೆ ಪ್ರವೇಶಿಸಿದ ಸಿಸಿಟಿವಿ ದೃಶ್ಯಗಳು ಹೊರಬಿದ್ದಿವೆ. ಕೃತ್ಯ ಎಸಗಿದ ಬಳಿಕ ಬಲ್ವಿಂದರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಅಲ್ಲಿ ನಿಲ್ಲಿಸಿದ್ದ ಕಾರಿಗೆ ಸ್ವಲ್ಪ ಹಾನಿಯಾಗಿದೆ.
ಈತನ ವಿರುದ್ಧ ಕೊಲೆ ಯತ್ನ ಮತ್ತು ಪರವಾನಗಿ ಇಲ್ಲದೆ ಬಂದೂಕು ಹೊಂದಿದ್ದಕ್ಕಾಗಿ ಪ್ರಕರಣಗಳು ದಾಖಲಾಗಿವೆ. ಬಲ್ವಿಂದರ್ ತನ್ನ ಮಗಳಿಗೆ ಪ್ರೀತಿಯ ಹೆಸರಲ್ಲಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಮತ್ತು ಅದರ ಬಗ್ಗೆ ಜಗಳಗಳು ನಡೆಯುತ್ತಿದ್ದವು ಎಂದು ಬಾಲಕಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ರೇವಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

