ನವೆಂಬರ್ 30 ರಿಂದ ಡಿಸೆಂಬರ್ 14, 2024ರ ವರೆಗೆ ಉಡುಪಿ ಆಸುಪಾಸಿನ 27 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ಕಿಶೋರ ಯಕ್ಷಗಾನ ಸಂಭ್ರಮ – 2024 ನ್ನು
ಇಂದು (30.11.2024) ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ, ಉದ್ಘಾಟಿಸಿ, ವಿಶ್ವದಾದ್ಯಂತ ಸಾವಿರಾರು ಮಂದಿ ನಲಿದ, ನರ್ತಿಸಿದ, ಹಾಡಿದ, ಕಲೆಯನ್ನು ಪ್ರದರ್ಶಿಸಿದ ಈ ವೇದಿಕೆಯಲ್ಲಿ ಮಕ್ಕಳು ಕುಣ ದಾಡುವುದು ಕೃಷ್ಣನಿಗೆ ಬಹಳ ಸಂತಸದ ವಿಚಾರ.
ಯಕ್ಷಶಿಕ್ಷಣ ಒಂದು ದೇಶಕ್ಕೆ ಮಾದರಿಯಾದಂತಹ ಸಂಸ್ಥೆ. ಈ ಅಭಿಯಾನ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
ಅಂಬಲಪಾಡಿ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ, ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್, ಕರ್ನಾಟಕ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಡಿ.ಡಿ.ಪಿ.ಐ ಕೆ. ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ,
ಅಮೆರಿಕಾದ ಪಣಂಬೂರು ವಾಸುದೇವ ಐತಾಳ್, ಯು. ವಿಶ್ವನಾಥ ಶೆಣೈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು.
ಕಾರ್ಯದರ್ಶಿ ಮುರಲಿ ಕಡೆಕಾರ್ ನಿರ್ವಹಿಸಿದರು. ಯಕ್ಷಶಿಕ್ಷಣ ಟ್ರಸ್ಟ್ ವಿಶ್ವಸ್ಥರಾದ ನಾರಾಯಣ ಎಂ. ಹೆಗಡೆ ಧನ್ಯವಾದ ಸಮರ್ಪಿಸಿದರು.
ಸಮಾರಂಭದ ಬಳಿಕ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಂದ ನರಸಿಂಹ ತುಂಗರ ನಿರ್ದೇಶನದಲ್ಲಿ ಶಶಿಪ್ರಭಾ ಪರಿಣಯ ಸೊಗಸಾಗಿ ಪ್ರಸ್ತುತಗೊಂಡಿತು.
