ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಯಕ್ಷಗಾನ ಕಲಾವಿದ ವಸಂತ ಭಟ್ (64 ವರ್ಷ) ಇಂದು (02.12.2024) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಹಳುವಳ್ಳಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೃಷ್ಣಯ್ಯರ ಪುತ್ರರಾದ ಇವರು ಅಮೃತೇಶ್ವರೀ, ಬಾಳೆಹೊಳೆ ಹಾಗೂ ದೀರ್ಘಕಾಲ ಗುತ್ಯಮ್ಮ ಮೇಳದಲ್ಲಿ ವೇಷಧಾರಿಯಾಗಿ ಕಲಾಸೇವೆ ಗೈದಿದ್ದಾರೆ.
ದೇವೇಂದ್ರ, ಶತ್ರುಘ್ನ, ಕಮಲಭೂಪ, ಹಂಸಧ್ವಜ, ಬಲರಾಮ, ಮೊದಲಾದ ರಾಜ ವೇಷದೊಂದಿಗೆ ಬಣ್ಣದ ವೇಷ ಮಾಡಿ ಜನ ಮೆಚ್ಚುಗೆ ಗಳಿಸಿದ್ದರು.
ಪ್ರಕೃತ ಗುತ್ಯಮ್ಮ ಮೇಳದ ಕಲಾವಿದರಾಗಿದ್ದ ವಸಂತ ಭಟ್ ಓರ್ವ ಸರಳ ಸಜ್ಜನಿಕೆಯ ಕಲಾವಿದರಾಗಿದ್ದರು. ಸಂಸ್ಥೆಯ ಬಗ್ಗೆ ಅತೀವ ಗೌರವಾಧಾರಗಳನ್ನು ಹೊಂದಿದ್ದ ಇವರು ಪತ್ನಿ, ಈರ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

