ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ನ ತೃತೀಯ ಇಂಜಿನೀಯರ್ ವಿದ್ಯಾರ್ಥಿನಿ ಸೌಜನ್ಯ ಇವಳಿಗೆ ಬ್ರಹ್ಮಾವರ ತಾಲೂಕಿನ ಆರೂರಿನಲ್ಲಿ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಅವರ ಶಷ್ಠ್ಯಬ್ಧಪೂರ್ತಿ ಸಂದರ್ಭದಲ್ಲಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ವರಲಕ್ಷ್ಮೀ’ ಇಂದು (07.12.2024) ಉದ್ಘಾಟನೆಗೊಂಡು ಹಸ್ತಾಂತರಿಸಲಾಯಿತು.
ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಸಮಾಜದಲ್ಲಿ ಉಳ್ಳವರು ಇಲ್ಲದವರಿಗೆ ಸಹಾಯ ಮಾಡುತ್ತಾ ಸಮತ್ವ ಭಾವದಿಂದ ನಡೆದರೆ ರಾಮರಾಜ್ಯ ನಿರ್ಮಾಣವಾಗುತ್ತದೆ.
ಯಕ್ಷಗಾನ ಕಲಾರಂಗ ಈ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಾ ಎಲ್ಲರಿಗೆ ಮಾದರಿಯಾಗಿದೆ ಎಂದರು. ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ದಂಪತಿಗಳನ್ನು ಸ್ವಾಮೀಜಿಯವರು ಅನುಗ್ರಹ ಮಂತ್ರಾಕ್ಷತೆ ನೀಡಿ ಹರಸಿದರು.
ಈ ಸಂದರ್ಭದಲ್ಲಿ ಆರೂರು ಪಂಚಾಯತ್ ಅಧ್ಯಕ್ಷರಾದ ಗುರುರಾಜ ರಾವ್, ಮಾಜಿ ಅಧ್ಯಕ್ಷ ರಾಜು ಕುಲಾಲ, ಸಾಮಾಜಿಕ ಕಾರ್ಯಕರ್ತರುಗಳಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಯು. ವಿಶ್ವನಾಥ ಶೆಣೈ, ಸಂಸ್ಥೆಯ ಉಪಾಧ್ಯಕ್ಷರಾದ ಎಸ್. ವಿ. ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಡುಪಿ ನಗರಸಭಾ ಮಾಜಿ ಅಧ್ಯಕ್ಷ ಕಿರಣ ಕುಮಾರ್, ಕರ್ಜೆ ಬಾಲಕೃಷ್ಣ ಶೆಟ್ಟಿ, ಮುಂಬೈಯ ಶ್ರೀಧರ ಶೆಟ್ಟಿ, ಶಿರ್ವಾದ ಸುರೇಶ್ ಕಾಮತ್, ಗಿರಧರ ಪ್ರಭು, ರವೀಂದ್ರ ಶೆಟ್ಟರ ಪುತ್ರ ವರುಣ್ ಹಾಗು ಕುಟುಂಬದ ಬಂಧುಗಳು,
ಯಕ್ಷಗಾನ ಕಲಾರಂಗದ ಭುವನ ಪ್ರಸಾದ ಹೆಗ್ಡೆ, ವಿಜಯ ಕುಮಾರ ಮುದ್ರಾಡಿ, ಅನಂತರಾಜ ಉಪಾಧ್ಯ, ನಟರಾಜ ಉಪಾಧ್ಯ, ಕೃಷ್ಣಮೂರ್ತಿ ಭಟ್, ದಿನೇಶ ಪೂಜಾರಿ, ಅಶೋಕ ಎಂ., ಅಜಿತ್ ಕುಮಾರ್ ಭಾಗವಹಿಸಿದ್ದರು.
ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.
ನಾರಾಯಣ ಎಮ್. ಹೆಗಡೆ ವಂದಿಸಿದರು. ಎಚ್. ಎನ್. ಶೃಂಗೇಶ್ವರ ಸಹಕರಿಸಿದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಮಾರ್ಗದರ್ಶನದಲ್ಲಿ ಕೇವಲ 40 ದಿನಗಳಲ್ಲಿ ನಿರ್ಮಾಣಗೊಂಡ 58ನೆಯ ಮನೆಯಾಗಿದೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions