ಉಡುಪಿ ಯಕ್ಷಗಾನ ಕಲಾರಂಗವು ಪ್ರತಿ ವರ್ಷ ಯಕ್ಷಗಾನ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿಯನ್ನು ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಇವರಿಗೆ ಹಾಗೂ ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಅನುಕ್ರಮವಾಗಿ ಹಿರಿಯ ಅರ್ಥಧಾರಿಗಳಾದ ವಾಸುದೇವ ರಾವ್ ಸುರತ್ಕಲ್ ಹಾಗೂ ಉಮಾಕಾಂತ ಭಟ್ಟ ಕೆರೇಕೈ ಇವರಿಗೆ ನೀಡಲಾಗುವುದು.
ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟಂಬರ್ 26, ಭಾನುವಾರ ಸಂಜೆ 4 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಪಿ.ಎಸ್. ಯಡಪಡಿತ್ತಾಯರ ಅಧ್ಯಕ್ಷತೆಯಲ್ಲಿ ಜರಗಲಿರುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕ ದೇವಳದ ಮಾಜಿ ಧರ್ಮದರ್ಶಿಗಳಾದ ಕೃಷ್ಣಪ್ರಸಾದ ಅಡ್ಯಂತಾಯ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಪೂರ್ವದಲ್ಲಿ ಅಪರಾಹ್ನ 1.45ಕ್ಕೆ ಕರ್ಗಲ್ಲು ವಿಶ್ವೇಶ್ವರ ಭಟ್ಟರ ನಾಟ್ಯ ಪ್ರಾತ್ಯಕ್ಷಿಕೆ ಬಳಿಕ 3ರಿಂದ 4ರ ವರೆಗೆ ತಾಳಮದ್ದಲೆ ‘ಕನಸ ಕಂಡನು ಕಂಸ’ ಪ್ರಸ್ತುತಗೊಳ್ಳಲಿದೆ. ಈ ಎಲ್ಲ ಕಾರ್ಯಕ್ರಮಗಳು C4U ಚಾನಲ್‌ನಲ್ಲಿ ನೇರಪ್ರಸಾರಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು