ಎರಡು ದಿನಗಳ ಕರ್ನಾಟಕ ರಾಜ್ಯ ಪ್ರವಾಸವನ್ನು ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದಿದ್ದಾರೆ.
ಅವರನ್ನು ಬೆಂಗಳೂರಿನ ಯಲಹಂಕ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪ್ರಧಾನಿ ಮೋದಿಯವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮತ್ತು ಅದರ ಜೊತೆಗೆ ಮೂರು ಹೆಲಿಕಾಪ್ಟರ್ ಗಳು ಬೆಂಗಳೂರಿಗೆ ಬಂದಿಳಿದಿವೆ.
ಅವರನ್ನು ಯಲಹಂಕ ವಾಯುನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.
ಸುಮಾರು ಒಂದೂವರೆ ವರ್ಷದ ನಂತರ ಕರ್ನಾಟಕಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಮೈಸೂರು ಅರಮನೆ ಮುಂಭಾಗ ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಮುಖ್ಯ ಕಾರ್ಯಕ್ರಮವಾಗಿದೆ.
ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು, ನಾಳೆ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ತಿರುವನಂತಪುರಕ್ಕೆ ತೆರಳಲಿದ್ದಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು