ಭಾರೀ ಮಳೆಯಿಂದ ಮಣ್ಣಿನೊಳಗಿನ ನೀರಿನ ಹರಿವು ಹೆಚ್ಚಾಗಿದ್ದು ಮಡಿಕೇರಿಯಲ್ಲಿ ತಡೆಗೋಡೆ ರಸ್ತೆ ಕುಸಿಯುವ ಸಾಧ್ಯತೆಯಿದ್ದು ಸುಗಮ ರಸ್ತೆ ಸಂಚಾರಕ್ಕೆ ಆತಂಕ ಎದುರಾಗಿದೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಸಮೀಪದ ರಸ್ತೆ ತಡೆಗೋಡೆ ಕುಸಿಯುವ ಭೀತಿಯಲ್ಲಿದೆ. ಯಾವ ಕ್ಷಣದಲ್ಲಿಯೂ ರಸ್ತೆ ಕುಸಿಯುವ ಸಾಧ್ಯತೆ ಇರುವುದರಿಂದ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ರಾತ್ರಿಯೇ ಅಧಿಕಾರಿಗಳು ನೀಡಿದ ಸಲಹೆಯ ಮೇರೆಗೆ ದಿಢೀರ್ ಆಗಿ ಮಡಿಕೇರಿಯ ಟೋಲ್‌ಗೇಟ್ ಬಳಿಯೇ ಹೆದ್ದಾರಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.
ಕಳೆದ ವರ್ಷ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ತಡೆಗೋಡೆಗೆ ಹಾಕಿದ್ದ ಸ್ಲ್ಯಾಬ್‌ಗಳು ಉಬ್ಬಿ ಬೀಳುವ ಪರಿಸ್ಥಿತಿ ಈಗ ಎದುರಾಗಿದೆ. ತಡೆಗೋಡೆ ಉಬ್ಬಿರುವುದನ್ನು ಕಂಡ ಇಲಾಖೆ ಇಲ್ಲಿ ನೀರು ಹೊರ ಹೋಗಲು ರಂಧ್ರವನ್ನು ಕೊರೆಯುವ ವ್ಯವಸ್ಥೆ ಮಾಡಿದ್ದರು.

ಆದರೆ ಇದರಿಂದ ಇನ್ನಷ್ಟು ಅಪಾಯ ಹೆಚ್ಚಾಗಿದೆ. ಈ ಮುಚ್ಚಿದ ಹೆದ್ದಾರಿಗೆ ಪರ್ಯಾಯವಾಗಿ ಸಂಚಾರಕ್ಕೆ ಮಡಿಕೇರಿ – ಮೇಕೇರಿ ರಸ್ತೆಯನ್ನು ವ್ಯವಸ್ಥೆ ಮಾಡಲಾಗಿದೆ.
ರಸ್ತೆಯನ್ನು ದಿಢೀರ್ ಬಂದ್ ಮಾಡಿದ್ದರಿಂದ ಅಷ್ಟು ಸಣ್ಣ ರಸ್ತೆಯಲ್ಲಿ ಸಾಗಲು ಬೃಹತ್ ವಾಹನಗಳು ಪರದಾಡುತ್ತಿವೆ. ಸ್ಥಳದಲ್ಲೇ ಪೊಲೀಸ್ ಅಧಿಕಾರಿಗಳು ಮತ್ತು ಹೆದ್ದಾರಿ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

