ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಪುತ್ತೂರಿನ ದಂಪತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇವರು ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ.
ಪುತ್ತೂರಿನ ಸರ್ವೇ ಗ್ರಾಮದ ಬಾವಿಕಟ್ಟೆ ನಿವಾಸಿಗಳಾದ ಪ್ರಮೋದ್ ಮತ್ತು ಆತನ ಪತ್ನಿ ಸುಮಾ ಎಂಬವರನ್ನು ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಇವರು ವಿಟ್ಲ ಸಮೀಪದ ದಂಬೆತಾರು ವಿನಯಚಂದ್ರ ನಾಯಕ್ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.
ಮನೆಯ ಬೆಡ್ ರೂಮ್ ನ ಕಪಾಟಿನಲ್ಲಿದ್ದ ಚಿನ್ನದ ಬ್ರಾಸ್ ಲೈಟ್, ಚಿನ್ನದ ಲಕ್ಷ್ಮಿ ಸರ, ಚಿನ್ನದ ಪದಕ ಸಹಿತ ಸರ, ಚಿನ್ನದ ಲಕ್ಷ್ಮಿ ಪದಕ ಸಹಿತ ಸರ, 3 ಚಿನ್ನದ ಉಂಗುರಗಳು, ಚಿನ್ನಾಭರಣಗಳು ಸೇರಿದಂತೆ ಒಟ್ಟು 98 ಗ್ರಾಂ ಆಭರಣಗಳನ್ನು ಕಳವು ಮಾಡಿದ್ದರು.
ಚಿನ್ನಾಭರಣಗಳ ಒಟ್ಟು ಮೌಲ್ಯ ಅಂದಾಜು 1,50,000/ ರೂಪಾಯಿ ಎಂದು ತಿಳಿದುಬಂದಿದೆ.
ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಬಂಧಿತರನ್ನು ಹೆಚ್ಚಿನ ವಿಚಾರಣೆಗೈಯಲಾಗುತ್ತಿದೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ