ಉದ್ಯಮಿ, ಮಾಜಿ ಲಯನ್‌ಗವರ್ನರ್ ಲ| ವಿ.ಜಿ. ಶೆಟ್ಟಿಯವರು ಉಡುಪಿ ಮಿಡ್‌ಟೌನ್ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಯಕ್ಷಗಾನ ಕಲಾರ0ಗ, ಇನ್ನಂಜೆ ಶಾಲಾ ಮಕ್ಕಳ ಯುನಿಫಾರ್ಮ್ ಮತ್ತು ಇನ್ನಂಜೆ ಆ0ಗ್ಲಮಾಧ್ಯಮ ಶಾಲಾ ಅಭಿವೃದ್ಧಿ ಕಾರ್ಯಗಳಿಗೆ ಅನುಕ್ರಮವಾಗಿ ರೂ. 2,00,000/-, ರೂ. 62,000/- ಮತ್ತು ರೂ.50,000/- ಸಹಾಯಧನದ ಚೆಕ್ ವಿತರಿಸಿದರು.
ಯಕ್ಷಗಾನ ಕಲಾರಂಗದ ಪರವಾಗಿ ಚೆಕ್ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಎಮ್.ಗಂಗಾಧರ ರಾವ್ ನಮ್ಮ ಸಂಸ್ಥೆಯ ಉಪಾಧ್ಯಕ್ಷರೂ ಹೆಮ್ಮೆಯ ಕಾರ್ಯಕರ್ತರಾದ ವಿ.ಜಿ. ಶೆಟ್ಟಿಯಂಥವರಿ0ದ ಸಂಸ್ಥೆ ಸಮಾಜಪರ ಕೆಲಸ ಮಾಡಲು ಸಾಧ್ಯವಾಗಿದೆ ಎಂದು ಸಂಸ್ಥೆ ಮಾಡುತ್ತಿರುವ ಕಾರ್ಯಕ್ರಮಗಳ ಕಿರು ಪರಿಚಯ ಮಾಡಿದರು.
ಈ ಸಂದರ್ಭದಲ್ಲಿ ಕಲಾರ0ಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಪ್ರೊ. ನಾರಾಯಣ ಎಮ್. ಹೆಗಡೆ, ಎ. ನಟರಾಜ ಉಪಾಧ್ಯಾಯರು ಉಪಸ್ಥಿತರಿದ್ದರು.
ವಿ. ಜಿ. ಶೆಟ್ಟಿಯವರು ಕಳೆದ ಕೆಲವು ವರ್ಷಗಳಿಂದ ಯಕ್ಷಗಾನ ಕಲಾರಂಗ ಮತ್ತು ತಾನು ಕಲಿತ ಶಾಲೆಗೆ ನಿರಂತರ ಸಹಾಯಧನ ನೀಡುತ್ತಾ ಬಂದಿರುತ್ತಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು