ನಿನ್ನೆ ರಾತ್ರಿ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲ್ಲಲ್ಪಟ್ಟ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಇಡೀ ಕರ್ನಾಟಕವೇ ಬೆಚ್ಚಿ ಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಹಲವಾರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ, ಪುತ್ತೂರು, ಕಡಬ, ಸುಳ್ಯ ತಾಲೂಕುಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಪ್ರವೀಣ್ ನೆಟ್ಟಾರು (32 ) ಹತ್ಯೆಯ ಬಳಿಕ ಕರಾವಳಿಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಡಿಜಿ ಐಜಿಪಿ ಪ್ರವೀಣ್ ಸೂದ್ ಅವರು ದಕ್ಷಿಣ ಕನ್ನಡ ಜಿಲಾ ಎಸ್‌ಪಿ ಸೂಚನೆ ನೀಡಿ ಪುತ್ತೂರಿನಾದ್ಯಂತ ಸೆಕ್ಷನ್ 144 ಜಾರಿಗೊಳಿಸಲು ಸೂಚನೆ ನೀಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದ್ದಾರೆ.
ಘಟನೆ ನೆಡೆದ ಕೂಡಾಲೇ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ” ಎಂದು ಟ್ವೀಟ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆಗೆ ಹಿಂದೂ ಕಾರ್ಯಕರ್ತರು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ರಾತ್ರಿ ಪುತ್ತೂರಿನ ಪ್ರಗತಿ ಆಸ್ಪತ್ರೆಯ ಮುಂದೆ ಸಾಕಷ್ಟು ಜನರು ಸೇರಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತ್ತು.
ಜಿಲ್ಲಾಧಿಕಾರಿಗಳು ಬರುವವರೆಗೆ ಮೃತದೇಹ ಕೊಂಡೊಯ್ಯಲು ಬಿಡುವುದಿಲ್ಲವೆಂದು ಬಿಜೆಪಿ ಪಕ್ಷದ ಕಾರ್ಯಕರ್ತರು, ಹಿಂದೂಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. “ಕೇಂದ್ರ ಸರಕಾರವು ನಮ್ಮದೇ, ರಾಜ್ಯ ಸರಕಾರವು ನಮ್ಮದೇ, ಕೊನೆಗೆ ಸಾವು ನಮ್ಮದೇʼʼ ಎಂಬ ಪೋಸ್ಟರ್‌ಗಳೂ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ಹತ್ಯೆ ಖಂಡಿಸಿ ಇಂದು (27.07.2022) ಪುತ್ತೂರು, ಕಡಬ, ಸುಳ್ಯ ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ನಾಯಕರು ಕರೆ ನೀಡಿದ್ದಾರೆ.
- ಲಿವ್-ಇನ್ ಸಂಗಾತಿಯನ್ನು ಕೊಂದು ಆಕೆಯ ದೇಹವನ್ನು ಸುಟ್ಟುಹಾಕಿದ ವಿವಾಹಿತ ವ್ಯಕ್ತಿ
- ಮೊಘಲರು ಹರಿಹರ್ ಮಂದಿರವನ್ನು ಕೆಡವಿ ಶಾಹಿ ಜಾಮಾ ಮಸೀದಿಯನ್ನು ನಿರ್ಮಿಸಿದರೆಂದು ಆರೋಪಿಸಿ ನ್ಯಾಯಾಲಯಕ್ಕೆ ದೂರು: ಸಮೀಕ್ಷೆಗೆ ಬಂದ ಅಧಿಕಾರಿಗಳ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ – ಪೊಲೀಸರ ಅಶ್ರುವಾಯು ದಾಳಿಯಲ್ಲಿ ಮೂವರ ಸಾವು
- ಮಲಯಾಳಂ ಸಿನಿಮಾ ಸೆಟ್ಗಳು ಸೇಫ್ ಅಲ್ಲ ಎಂದು ಹೇಳಿದ ನಟಿ ಸುಹಾಸಿನಿ ಮಣಿರತ್ನಂ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ