Friday, November 22, 2024
Homeಸುದ್ದಿಪ್ರವೀಣ್ ನೆಟ್ಟಾರ್ ಹತ್ಯೆ - ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಬಂಧನ 

ಪ್ರವೀಣ್ ನೆಟ್ಟಾರ್ ಹತ್ಯೆ – ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಬಂಧನ 

ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಇಂದು ಇಬ್ಬರನ್ನು ಬಂಧಿಸಲಾಗಿದ್ದು, ಇಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಮೊಹ್ಮದ್‌ ಶಫೀಕ್‌ (ಬೆಳ್ಳಾರೆ),  ಜಾಕೀರ್‌(ಸವಣೂರು) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇದುವರೆಗೆ 15 ಮಂದಿಯನ್ನು ವಿಚಾರಣೆಗೊಳಪಡಿಸಿದ್ದು, ಈ ಪೈಕಿ 2 ಮಂದಿಯನ್ನು ಬಂಧಿಸಲಾಗಿದೆ.

ಘಟನೆಗೆ ಕೇರಳ ನೋಂದಣಿ ವಾಹನ ಬಳಸಿರುವ ಸಾಧ್ಯತೆಯಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments