ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ವಿದ್ಯಾರ್ಥಿನಿ ರಶ್ಮಿತಾ ಇವಳಿಗೆ ಜನ್ಸಾಲೆಯಲ್ಲಿ ಡಾ.ರಾಜಾ ವಿಜಯಕುಮಾರ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿದ ಮನೆಯ ಪ್ರವೇಶೋತ್ಸವ ಇಂದು (01-08-2022) ಜರಗಿತು.
ಡಾ. ರಾಜಾ ವಿಜಯಕುಮಾರ್ ಮತ್ತು ಶ್ರೀಮತಿ ರಜನಿ ಭಾರತೀ ಮಂಗಲಂ ದಂಪತಿಗಳು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಭಾಗವಹಿಸಿದ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಶ್ರೀ ಎಚ್.ಎಸ್. ಶೆಟ್ಟಿ ಇವರು ಯಕ್ಷಗಾನ ಕಲಾರಂಗ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಸರಕಾರೇತರ ಸಂಘಟನೆಯೆಂದು ಶ್ಲಾಘಿಸಿದರು.
ಡಾ. ವಿಜಯಕುಮಾರ್ ಅವರು ವೈದ್ಯಕೀಯ ವಿದ್ಯಾಭ್ಯಾಸ ಮಾಡಲಿಚ್ಛಿಸಿದ ರಶ್ಮಿತಾಳ ಕಲಿಕೆಗೆ ಪೂರ್ತಿ ಪ್ರಾಯೋಜಕತ್ವ ವಹಿಸುವುದಾಗಿ ಭರವಸೆ ನೀಡಿದರು. ಸಂಸ್ಥೆಯ ಅಧ್ಯಕ್ಷ ಎಮ್.ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.
ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದ ಕೊನೆಯಲ್ಲಿ ಪ್ರೊ.ನಾರಾಯಣ ಎಮ್. ಹೆಗಡೆ ವಂದಿಸಿದರು.
ಸಂಸ್ಥೆಯ ಉಪಾಧ್ಯಕ್ಷರಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಹೆಗ್ಗುಂಜೆ ರಾಜೀವ ಶೆಟ್ಟಿಚಾರಿಟೇಬಲ್ ಸೊಸೈಟಿಯ ಉಪಾಧ್ಯಕ್ಷ ಶ್ರೀ ಎಚ್. ನಾಗರಾಜ್ ಶೆಟ್ಟಿ, ಯು.ವಿಶ್ವನಾಥ ಶೆಣೈ, ರಾಜಗೋಪಾಲ ಆಚಾರ್ಯ, ಮುಖ್ಯ ಶಿಕ್ಷಕ ಉದಯ ಗಾಂವ್ಕರ್, ಪರಶುರಾಮ್, ಉದಯ ಬಳೆಗಾರ್, ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ಮತ್ತು ಹಿರಿಯ ಕಲಾವಿದ ಆರ್ಗೋಡು ಮೋಹನದಾಸ ಶೆಣೈ ಉಪಸ್ಥಿತರಿದ್ದರು.
ಸಂಸ್ಥೆಯ ಸದಸ್ಯರಾದ ಪ್ರೊ.ಕೆ.ಸದಾಶಿವ ರಾವ್, ಎಚ್.ಎನ್. ಶೃಂಗೇಶ್ವರ, ಭುವನಪ್ರಸಾದ್ ಹೆಗ್ಡೆ, ದಿನೇಶ್ ಪಿ.ಪೂಜಾರಿ. ಅಜಿತ್‌ಕುಮಾರ್, ಅನಂತರಾಜ ಉಪಾಧ್ಯ, ಕಿಶೋರ್ ಸಿ.ಉದ್ಯಾವರ, ಕೃಷ್ಣಮುರ್ತಿ ಭಟ್, ರಾಜೀವಿ ಭಾಗವಹಿಸಿದ್ದರು. ಇದು ಸಂಸ್ಥೆ ನಿರ್ಮಿಸಿದ 33ನೇ ಮನೆಯಾಗಿದ್ದು, ಇನ್ನೂ ನಾಲ್ಕು ಮನೆಗಳ ಹಸ್ತಾಂತರ ಸದ್ಯದಲ್ಲೇ ನಡೆಯಲಿದೆ.
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ