ಬೆಂಗಳೂರಿನ ದಂತವೈದ್ಯೆಯೊಬ್ಬರು ಮಗುವಿಗೆ ನೇಣು ಹಾಕಿ ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆಯ ಹೆಸರು ಸೈಮಾ ನಾರಾಯಣ್.
ಆರಾಧನಾ ಹೆಸರಿನ ತನ್ನ 10 ವರ್ಷದ ಮಗಳಿಗೆ ಇನ್ನೊಂದು ಕೋಣೆಯಲ್ಲಿ ನೇಣು ಹಾಕಿ ಹತ್ಯೆ ಮಾಡಿದ ಬಳಿಕ ಸೈಮಾ ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೈಮಾ ಅವರ ಪತಿ ನಾರಾಯಣ್ ಅವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಮೂಲದ ದಂತವೈದ್ಯೆ ಪತ್ನಿ ಸೈಮಾ ಮುತ್ತಪ್ಪ, ಕೋಲಾರ ಮೂಲದ ದಂತವೈದ್ಯ ನಾರಾಯಣ್ ಕಳೆದ 10 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ದಂತವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ನಾರಾಯಣ್ ಮತ್ತು ಸೈಮಾ ಗಂಡ ಹೆಂಡತಿ ಇಬ್ಬರು ಸೇರಿ ಆಸ್ಪತ್ರೆಯನ್ನು ನಡೆಸುತ್ತಿದ್ದರು.
ಪತಿ ನಾರಾಯಣ್ ಮನೆಯಲ್ಲಿಲ್ಲದ ವೇಳೆಯಲ್ಲಿ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲಿನ ಪ್ರತ್ಯೇಕ ಕೋಣೆಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

