ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇದರ ಆಶ್ರಯದಲ್ಲಿ ಆಗಸ್ಟ್ 06ರಂದು ನಡೆದ ಪುತ್ತೂರು ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ವಿಶಾಲ್ ಪಿ(ಶ್ರೀ ವಿಠಲ.ಪಿ ಮತ್ತು ರೇಷ್ಮಾಇವರ ಪುತ್ರ) [30-35 kg] (9ನೇ ತರಗತಿ) ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ, ಲಿಖಿತ್ ಪಿ(ಶ್ರೀ ಚೆನ್ನಪ್ಪಗೌಡ ಮತ್ತು ಯಶಕಲಾ ಇವರ ಪುತ್ರ) [50-55 kg] (10ನೇ ತರಗತಿ) ದ್ವಿತೀಯ ಸ್ಥಾನ,
ಅದೈತ್ ಶರ್ಮ(ಶ್ರೀ ಸುಧೀರ್.ಬಿ.ಎಸ್ ಮತ್ತು ಲತಾ ಸುಧೀರ್ ಇವರ ಪುತ್ರ) [45-50 kg] (ಹತ್ತನೇತರಗತಿ) ತೃತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ತೃಪ್ತಿ ಎ.ಕೆ (ಶ್ರೀ ಆನಂದಗೌಡ.ಕೆ ಮತ್ತು ಪಿ.ದಾಜಮ್ಮಇವರ ಪುತ್ರಿ) [44-48 kg] (10 ನೇ ತರಗತಿ) ತೃತೀಯ ಸ್ಥಾನ ಗಳಿಸಿರುತ್ತಾರೆ.
ಇದರಲ್ಲಿ ಪ್ರಥಮ ಸ್ಥಾನ ಪಡೆದ 9ನೇ ತರಗತಿ ವಿಶಾಲ್ ಪಿ ಇವರು ಕಟೀಲಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್‌ಕುಮಾರ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು