ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ದ್ವಿತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಕೀರ್ತಿರಾಜ್ ಪೂಜಾರಿ ಕಾನ ಇವರು ರಾಜ್ಯಮಟ್ಟದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಅತ್ಲೆಟಿಕ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಥಮ ರಾಷ್ಟ್ರೀಯ ಜಾವೆಲಿನ್ ದಿನದ ಅಂಗವಾಗಿ ನಡೆದ ಈ ಸ್ಪರ್ಧೆಯಲ್ಲಿ 23 ವರ್ಷ ವಯೋಮಿತಿಯ ವಿಭಾಗದಲ್ಲಿ ಇವರು ಪ್ರಥಮ ಸ್ಥಾನವನ್ನು ಗೆದ್ದುಕೊಂಡಿದ್ದಾರೆ.
ಒಲಿಂಪಿಕ್ಸ್ ನಲ್ಲಿ ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದ ಸವಿನೆನಪಿಗಾಗಿ ರಾಷ್ಟ್ರೀಯ ಜಾವೆಲಿನ್ ದಿನವನ್ನು ಆಚರಿಸಲಾಗುತ್ತದೆ.
ಕೀರ್ತಿರಾಜ್ ಅವರು ಇತ್ತೀಚಿಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಜಾವೆಲಿನ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಇವರು ನಿಡ್ಪಳ್ಳಿ ಗ್ರಾಮದ ಸಂಜೀವ ಪೂಜಾರಿ ಕಾನ ಮತ್ತು ಜಯಂತಿ ದಂಪತಿಯ ಪುತ್ರರಾಗಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

