ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು 97% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಜುಲೈ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 276 ವಿದ್ಯಾರ್ಥಿಗಳು ಹಾಜರಾಗಿದ್ದು 264 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 4 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-100%, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್-99%, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-98% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ-89% ಫಲಿತಾಂಶವನ್ನು ದಾಖಲಿಸಿವೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.
ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ. ಕೆ ತಿಳಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

