ಟೇಬಲ್ ಟೆನಿಸ್ ಆಟಗಾರ್ತಿ ನೈನಾ ಜೈಸ್ವಾಲ್ ಅವರ ತಂದೆ ಸಾಮಾಜಿಕ ಜಾಲತಾಣದಲ್ಲಿ ಮಗಳಿಗೆ ಕಿರುಕುಳ ನೀಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಟೇಬಲ್ ಟೆನಿಸ್ ಆಟಗಾರ್ತಿ ನೈನಾ ಜೈಸ್ವಾಲ್ ಗೆ ವ್ಯಕ್ತಿಯೊಬ್ಬ ಆನ್ಲೈನ್ನಲ್ಲಿ ಕಿರುಕುಳ ನೀಡಿದ್ದು, ಪ್ರಕರಣ ದಾಖಲಾಗಿದೆ. ಆನ್ಲೈನ್ನಲ್ಲಿ ಕ್ರೀಡಾಪಟುವಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಶುಕ್ರವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಟೇಬಲ್ ಟೆನಿಸ್ ಆಟಗಾರ್ತಿ ನೈನಾ ಜೈಸ್ವಾಲ್ ಅವರ ತಂದೆ ಇನ್ಸ್ಟಾಗ್ರಾಮ್ನಲ್ಲಿ ಕಿರುಕುಳ ನೀಡುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಸಂಪರ್ಕಿಸಿದ್ದಾರೆ. ನಿನ್ನೆ ರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದು, ಶೀಘ್ರವೇ ಬಂಧಿಸುತ್ತೇವೆ ಎಂದು ಸೈಬರ್ ಕ್ರೈಂ ಸೆಕ್ಯುರಿಟಿ ಉಪ ಪೊಲೀಸ್ ಆಯುಕ್ತ ಗಜರಾವ್ ಭೂಪಾಲ್ ತಿಳಿಸಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ, ಆಕೆಯ ಫೇಸ್ಬುಕ್ ಖಾತೆಯನ್ನು ಸಹ ಹ್ಯಾಕ್ ಮಾಡಲಾಗಿದ್ದು, ಈ ಕಾರಣಕ್ಕಾಗಿ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

