ನಿನ್ನೆ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಅಹ್ಮದ್‌ನಗರ-ಪುಣೆ ಹೆದ್ದಾರಿಯ ರಂಜನ್‌ಗಾಂವ್ ಎಂಐಡಿಸಿ ಬಳಿ ರಾಂಗ್ ಸೈಡ್ ನಿಂದ ಬಂದ ಕಂಟೈನರ್ ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕಂಟೈನರ್ ಚಾಲಕ ಪರಾರಿಯಾಗಿದ್ದಾರೆ ಎಂದು ಎಸ್ಪಿ ಅಭಿನವ್ ದೇಶಮುಖ್ ಹೇಳಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ರಸ್ತೆಯ ರಾಂಗ್ ಸೈಡ್ ನಿಂದ ಕಂಟೈನರ್ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಕುರಿತು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ದೇಶಮುಖ್, “ಕಾರು ರಾಂಗ್ ಸೈಡ್ ನಿಂದ ಬಂದ ಕಂಟೈನರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ನಂತರ ಕಂಟೈನರ್ ಚಾಲಕ ತಲೆಮರೆಸಿಕೊಂಡಿದ್ದಾನೆ, ”ಎಂದು ಹೇಳಿದರು.
ಬೆಳವಣಿಗೆಯನ್ನು ದೃಢೀಕರಿಸಿದ ರಂಜನ್‌ಗಾಂವ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, “ಒಂದು ಕುಟುಂಬದ ಆರು ಜನರು ಕಾರಿನಲ್ಲಿ ಪುಣೆಗೆ ಪ್ರಯಾಣಿಸುತ್ತಿದ್ದರು. ಕರೇಗಾಂವ್ ಬಳಿ ತಲುಪಿದಾಗ ರಾಂಗ್ ಸೈಡ್ ನಿಂದ ಬಂದ ಕಂಟೈನರ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕುಟುಂಬದ ಐವರು ಮೃತಪಟ್ಟರೆ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಬುಧವಾರ ಬೆಳಗಿನ ಜಾವ 1.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೂಲಗಳ ಪ್ರಕಾರ ಮೃತಪಟ್ಟವರಲ್ಲಿ ನಾಲ್ಕು ವರ್ಷದ ಬಾಲಕಿ ಸೇರಿದಂತೆ ಮೂವರು ಮಕ್ಕಳು. ಇತರ ಇಬ್ಬರು ಪುರುಷರು. ಗಾಯಗೊಂಡ ಮಹಿಳೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಂಟೈನರ್ ಚಾಲಕನ ವಿರುದ್ಧ ಪುಣೆ ಜಿಲ್ಲಾ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮೋಟಾರು ವಾಹನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧವನ್ನು ದಾಖಲಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

