ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ “ಕೋವಿಡ್-19ರ ಕಾರಣದಿಂದ ಕಾರ್ಯ ಚಟುವಟಿಕೆಗಳ ಮಾದರಿಯಲ್ಲಿ ಬದಲಾವಣೆ-ದಕ್ಷಿಣ ಕನ್ನಡದಲ್ಲಿ ಒಂದು ಪ್ರಾಯೋಗಿಕ ಅಧ್ಯಯನ” ಎನ್ನುವ ಯೋಜನಾ ಪ್ರಬಂಧಕ್ಕೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ ದೊರೆತಿದೆ.
ಆಗಸ್ಟ್ 12 ಮತ್ತು 13 ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಹಾಗೂ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ನಡೆದ 45ನೇ ಸರಣಿಯ ಕೆಎಸ್‌ಸಿಎಸ್‌ಟಿ ಸ್ಟೂಡೆಂಟ್ ಪ್ರಾಜೆಕ್ಟ್ ಪ್ರೊಗ್ರಾಂನ ಸ್ನಾತಕೋತ್ತರ ಎಂಬಿಎ ವಿಭಾಗದಲ್ಲಿ ವಿದ್ಯಾರ್ಥಿಗಳು ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿಯೊಂದಿಗೆ ನಗದು ಪುರಸ್ಕಾರವನ್ನು ಪಡೆದುಕೊಂಡಿದ್ದಾರೆೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕರಿಸಿದ್ದಪ್ಪ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಜೀವಿತಾ.ಬಿ.ವಿ ಹಾಗೂ ಪ್ರೊ.ರೇಶ್ಮಾ ಪೈ.ಎ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಅಂಕಿತ, ಶ್ವೇತಾ.ಕೆ, ಮಂಜುನಾಥ್.ಎಚ್.ಎಮ್ ಮತ್ತು ಕೃತನ್.ಬಿ.ಕೆ ಈ ಅಧ್ಯಯನವನ್ನು ಮಾಡಿ ಯೋಜನಾ ವರದಿಯನ್ನು ಮಂಡಿಸಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

