ಪುತ್ತೂರು: ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಡಾಟಾ ಸೈನ್ಸ್, ಇಂಟರ್ನೆಟ್ ಆಫ್ ಥಿಂಗ್ಸ್ ಮುಂತಾದವು ಭವಿಷ್ಯದ ಇಂಜಿನಿಯರಿಂಗ್ ಕೋರ್ಸುಗಳಾಗಿದ್ದು, ವ್ಯಾಪಕ ಅವಕಾಶವನ್ನು ಹೊಂದಿವೆ ಎಂದು ಬೆಂಗಳೂರಿನ ಅಖಿಲ ಭಾರತೀಯ ವಿಜ್ಞಾನ ಸಂಸ್ಥೆಯ ನೆಟ್ವರ್ಕ್ ಪ್ರಾಜೆಕ್ಟ್ ವಿಭಾಗದ ಪೂರ್ವ ಮುಖ್ಯಸ್ಥ ಡಾ.ಅಶೋಕ್ ರಾವ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಡಾಟಾ ಸೈನ್ಸ್, ಇಂಟರ್ನೆಟ್ ಆಫ್ ಥಿಂಗ್ಸ್-ಇದರ ಉಪಯೋಗಗಳು ಮತ್ತು ಭವಿಷ್ಯದ ಇಂಜಿನಿಯರಿಂಗ್ ನ ಚಾಲನಾ ಶಕ್ತಿ ಎನ್ನುವ ವಿಷಯದ ಕುರಿತು ಮಾತನಾಡಿದರು.
ಭವಿಷ್ಯದ ಎಲ್ಲಾ ಕಾರ್ಯಗಳು ಈ ತಂತ್ರಜ್ಞಾನವನ್ನು ಬಳಸಿಕೊಂಡೇ ನಡೆಯಲಿದ್ದು ಇದಕ್ಕೆ ಹೆಚ್ಚಿನ ಬೇಡಿಕೆ ಬರುತ್ತದೆ ಎಂದರು. ಅಭಿವೃದ್ಧಿಪಡಿಸಿದ ಮಾಹಿತಿಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವುದು ಮತ್ತು ಪುನರ್ಬಳಕೆಗೆ ನೀಡುವುದು ಒಂದು ಸವಾಲಿನ ಕೆಲಸ. ಡಾಟಾ ಸೈನ್ಸ್ ವಿಭಾಗವು ಈ ಕೆಲಸವನ್ನು ಸುಲಲಿತವಾಗಿ ಮಾಡುವ ವಿಧಾನವನ್ನು ಕಲಿಸುತ್ತದೆ ಎಂದರು. ಕೃತಕ ಬುದ್ಧಿಮತ್ತೆಯು ಪ್ರಸ್ತುತ ಎಲ್ಲಾ ವಿಭಾಗಗಳಲ್ಲಿಯೂ ತನ್ನ ಛಾಪನ್ನು ಮೂಡಿಸುತ್ತಿದೆ ಎಂದು ಹೇಳಿದರು.
ಪ್ರಾಂಶುಪಾಲ ಡಾ,ಮಹೇಶ್ ಪ್ರಸನ್ನ.ಕೆ, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಗೋವಿಂದರಾಜ್, ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್, ಕಾರ್ಯಕ್ರಮ ಸಂಯೋಜಕ ಪ್ರೊ.ಅಭಿಷೇಕ್ ಕುಮಾರ್.ಕೆ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ರಚನಾ.ಎಂ.ಎಸ್ ಅತಿಥಿಗಳನ್ನು ಪರಿಚಯಿಸಿದರು. ಶ್ರೀನಿಧಿ ಸ್ವಾಗತಿಸಿ, ಚೈತ್ರಾ ವಂದಿಸಿದರು. ಪೃಥ್ವಿ.ಎಸ್.ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ