ಪುತ್ತೂರು, ಅ 29: ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನಡೆದ ಕಾಮ್-ಇನ್‌ಸ್ಟಾನಿಯಾ 2022 ರಾಷ್ಟ್ರಮಟ್ಟದ ಅಂತರ್ ಕಾಲೇಜು ಕಾಮರ್ಸ್ ಫೆಸ್ಟ್ ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ.
ಹ್ಯೂಮನ್ ರಿಸೋರ್ಸ್ ವಿಭಾಗದ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಶ್ಚಿತಾ ಹಾಗೂ ಶ್ರೀಪ್ರದಾ ರಾವ್ ಒಳಗೊಂಡ ತಂಡ ಪ್ರಥಮ ಸ್ಥಾನ ಪಡೆದಿದೆ.
ಬ್ಯುಸಿನೆಸ್ ಕ್ವಿಝ್ ನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವೈಭವ್ ಪ್ರಭು ಹಾಗೂ ನಿಹಾರ್ ರೈ ತಂಡವು ದ್ವಿತೀಯ ಸ್ಥಾನ ಪಡೆದಿದೆ. ಫೈನಾನ್ಸ್ ವಿಭಾಗದ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುದೇಶ್ ಹಾಗೂ ಪ್ರದೀಪ್ ತಂಡ ಪ್ರಥಮ ಸ್ಥಾನ ಪಡೆದಿದ್ದು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪ್ರತೀಕ್ಷಾ ಹಾಗೂ ಶ್ರೀರಕ್ಷಾ ತಂಡವು ದ್ವಿತೀಯ ಸ್ಥಾನ ಪಡೆದಿದೆ.
ಈ ಮೂಲಕ ಕಾಲೇಜಿನ ತಂಡವು ಫೆಸ್ಟ್ ನಲ್ಲಿ ಅಗ್ರಸ್ಥಾನಿಯಾಗಿ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ