ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಧಾಕೃಷ್ಣ ಆಚಾರ್ (83 ವರ್ಷ) ನಿನ್ನೆ (31-08-2022) ಸಂಜೆ 5:30ಕ್ಕೆ ನಿಧನರಾದರು.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೂರು ದಶಕಗಳಿಗೂ ಮಿಕ್ಕಿ ವಿದ್ಯಾರ್ಥಿಗಳ ಅತ್ಯಂತ ಅಚ್ಚುಮೆಚ್ಚಿನ ಅರ್ಥಶಾಸ್ತ್ರದ ಉಪನ್ಯಾಸಕರಾಗಿ ಬಳಿಕ ಪೂರ್ಣಪ್ರಜ್ಞ ಸಂಧ್ಯಾಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿದ್ದರು.
ಪ್ರಸ್ತುತ ಎಸ್.ವಿ.ಎಸ್.ಟಿ ಪ್ರೌಢಶಾಲೆ ಕಿದಿಯೂರು ಹಾಗೂ ಅಂಬಲಪಾಡಿ-ಕಿದಿಯೂರು ವಿದ್ಯಾಸಮುದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾಲಕರಾಗಿದ್ದರು. ವಿ.ಆರ್.ಕಿದಿಯೂರ್ ರವರು ಸ್ಥಾಪಿಸಿದ ಕಿದಿಯೂರು ನಾಗಲಕ್ಷ್ಮೀ ಶ್ರೀನಿವಾಸ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯದರ್ಶಿಯಾಗಿ ಕಳೆದ ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಅಲ್ಲದೆ ಹಲವಾರು ಸಾಮಾಜಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಪೂರ್ಣಪ್ರಜ್ಞ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಬಿ.ಎಂ. ಸೋಮಯಾಜಿ, ಕಾರ್ಯದರ್ಶಿ ತೇಜಸ್ವಿ ಶಂಕರ್, ಪ್ರಾಂಶುಪಾಲ ಡಾ. ಎ. ರಾಘವೇಂದ್ರ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ