ಉಪ್ಪಿನಂಗಡಿ ರೋಟರಿ ಕ್ಲಬ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆಯ ನಿಮಿತ್ತ ರಾಷ್ಟ್ರಪ್ರಶಸ್ತಿ ಪುರಸ್ಕೃತ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲ ರೋ.P H F ದಿವಾಕರ ಆಚಾರ್ಯ ಗೇರುಕಟ್ಟೆ, ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ಆಡಳಿತಾಧಿಕಾರಿ ಉಪ್ಪಿನಂಗಡಿ ರೋಟರಿ ಕ್ಲಬ್ಬಿನ ಮಾಜಿ ಅಧ್ಯಕ್ಷ ರವೀಂದ್ರ ದರ್ಬೆ, ಉಪ್ಪಿನಂಗಡಿ ಮಾದರಿ ಶಾಲಾ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಂದನಾ ಮತ್ತು ಇಂದ್ರಪ್ರಸ್ಥ ವಿದ್ಯಾಲಯದ ಶಿಕ್ಷಕಿ ಶ್ರೀಮತಿ ಆಶಾಲತಾ ನಾಯಕ್ ಇವರನ್ನು ಗೌರವಿಸಲಾಯಿತು.
ರೋಟರಿ ಅಧ್ಯಕ್ಷ ಜಗದೀಶ್ ನಾಯಕ್, ಕಾರ್ಯದರ್ಶಿ ಗಿರಿಧರ ನಾಯಕ್, ಮಾಜಿ ಅಧ್ಯಕ್ಷರಾದ ಅಜೀಜ್ ಬಸ್ತಿ ಕಾರ್, ವಿಜಯಕುಮಾರ್ ಕಲ್ಲಳಿಕೆ, ನಿವೃತ್ತ ಬಿಎಸ್ಎಫ್ ಕಮಾಂಡೆಂಟ್ ರೋ. ಡಿ. ಸಿ .ಚಂದಪ್ಪ ಮೂಲ್ಯ, ಅಬೂಬಕ್ಕರ್ ಪುತ್ತ, ಇಸ್ಮಾಯಿಲ್ ಇಕ್ಬಾಲ್, ನಿಕಟ ಪೂರ್ವ ಕಾರ್ಯದರ್ಶಿ ನವೀನ್ ಬ್ರಾಗ್ಸ್, ಸ್ವರ್ಣೇಶ ಗಾಣಿಗ, ಮತ್ತು ಕ್ಲಬ್ಬಿನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಸನ್ಮಾನಿತರಾದ ನಾಲ್ವರು ಶಿಕ್ಷಕರು ಶಿಕ್ಷಕ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿ ಗುರುವೃಂದದ ಮೇಲಿನ ಪ್ರೀತಿ ವಿಶ್ವಾಸಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.
ರೋಟರಿ ಕ್ಲಬ್ಬಿನ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಯೂನಿಕ್ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷ ಜಗದೀಶ್ ನಾಯಕ್ ಸ್ವಾಗತಿಸಿ ಕಾರ್ಯದರ್ಶಿ ಗಿರಿಧರ್ ನಾಯಕ್ ವಂದಿಸಿದರು.
- ಮೊಘಲರು ಹರಿಹರ್ ಮಂದಿರವನ್ನು ಕೆಡವಿ ಶಾಹಿ ಜಾಮಾ ಮಸೀದಿಯನ್ನು ನಿರ್ಮಿಸಿದರೆಂದು ಆರೋಪಿಸಿ ನ್ಯಾಯಾಲಯಕ್ಕೆ ದೂರು: ಸಮೀಕ್ಷೆಗೆ ಬಂದ ಅಧಿಕಾರಿಗಳ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ – ಪೊಲೀಸರ ಅಶ್ರುವಾಯು ದಾಳಿಯಲ್ಲಿ ಮೂವರ ಸಾವು
- ಮಲಯಾಳಂ ಸಿನಿಮಾ ಸೆಟ್ಗಳು ಸೇಫ್ ಅಲ್ಲ ಎಂದು ಹೇಳಿದ ನಟಿ ಸುಹಾಸಿನಿ ಮಣಿರತ್ನಂ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ