ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಮೊರಾಜಿ ದೇಸಾಯಿ ಶಾಲೆ, ಬಲ್ನಾಡು ಇದರ ಆಶ್ರಯದಲ್ಲಿ ಸೆಪ್ಟೆಂಬರ್ 9ರಂದು ನಡೆದ ಪುತ್ತೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ತಂಡದಲ್ಲಿ ಮೋಕ್ಷಿತ್(ನೇರಳಕಟ್ಟೆ ನಿವಾಸಿ ಶ್ರೀ ಜಗದೀಶ್ ಮತ್ತು ಪ್ರೇಮ ಇವರ ಪುತ್ರ), ಪ್ರೀತಮ್(ಮಿತ್ತೂರು ನಿವಾಸಿ ಜಯಂತ ಗೌಡ ಮತ್ತು ಲೀಲಾವತಿ ಇವರ ಪುತ್ರ), ರಿತೇಶ್(ಕಬಕ ನಿವಾಸಿ ಶ್ರೀ ವೆಂಕಪ್ಪ ಮತ್ತು ವೀಣ ಇವರ ಪುತ್ರ), ತ್ರಿಜಲ್(ಕೈಕಾರ ನಿವಾಸಿ ಶ್ರೀ ವಿನೋದ್ ಮತ್ತು ಶರಿಕ ಇವರ ಪುತ್ರ), ಎಂ.ಪ್ರಣಾಮ್ (ಮಿನಾವು ನಿವಾಸಿ ಶ್ರೀ ಕೇಶವ ಮತ್ತು ಶುಭಶ್ರೀ ಇವರ ಪುತ್ರ),
ಧನ್ವಿತ್.ಎಂ(ಬಲ್ನಾಡು ನಿವಾಸಿ ಶ್ರೀ ಕೆ.ಮಾಧವ ಗೌಡ ಮತ್ತು ಯಶೋಧ ಇವರ ಪುತ್ರ), ವೈಶಾಖ್(ಬುಳ್ಳೇರಿಕಟ್ಟೆ ನಿವಾಸಿ ಶ್ರೀ ಗಣೇಶ್ ಎಮ್ ಮತ್ತು ಸರಸ್ವತಿ.ಪಿ ಇವರ ಪುತ್ರ), ಚಿನ್ಮಯ್(ಒಳತ್ತಡ್ಕ ನಿವಾಸಿ ಶ್ರೀ ಸೇಸಪ್ಪ ಮತ್ತು ಚಂದ್ರಿಕಾ ಇವರ ಪುತ್ರ), ನಮನ್(ಶ್ರೀ ದಯಾನಂದ ಗೌಡ ಮತ್ತು ವಿಮಲಾ ಇವರ ಪುತ್ರ), ತನುಷ್(ಶ್ರೀ ಪಾಂಡುರ0ಗ.ಕೆ ಮತ್ತು ಕುಸುಮ.ಕೆ ಇವರ ಪುತ್ರ) ತೃತೇಶ್(ಶ್ರೀ ಅಶೋಕ್.ಬಿ.ಬಿ ಮತ್ತು ಪೂರ್ಣಿಮಾ ಇವರ ಪುತ್ರ) ಮತ್ತು ನಿವೇದ್ (ಶ್ರೀ ರಾಜೇಶ್ ಮತ್ತು ಅಶ್ವಿನಿ ಇವರ ಪುತ್ರ) ಇದ್ದು,
ರಿತೇಶ್ ಪಂದ್ಯಾಟದ ಉತ್ತಮ ದಾಳಿಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ತಂಡವು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಕುದ್ಮಾರು ಇಲ್ಲಿ ನಡೆಯುವ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಮೊಘಲರು ಹರಿಹರ್ ಮಂದಿರವನ್ನು ಕೆಡವಿ ಶಾಹಿ ಜಾಮಾ ಮಸೀದಿಯನ್ನು ನಿರ್ಮಿಸಿದರೆಂದು ಆರೋಪಿಸಿ ನ್ಯಾಯಾಲಯಕ್ಕೆ ದೂರು: ಸಮೀಕ್ಷೆಗೆ ಬಂದ ಅಧಿಕಾರಿಗಳ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ – ಪೊಲೀಸರ ಅಶ್ರುವಾಯು ದಾಳಿಯಲ್ಲಿ ಮೂವರ ಸಾವು
- ಮಲಯಾಳಂ ಸಿನಿಮಾ ಸೆಟ್ಗಳು ಸೇಫ್ ಅಲ್ಲ ಎಂದು ಹೇಳಿದ ನಟಿ ಸುಹಾಸಿನಿ ಮಣಿರತ್ನಂ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ