ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರಕಾಶ್ ಫೂಟ್ ವೇರ್ ಅಂಗಡಿಯಿಂದ ಲಕ್ಷಾಂತರ ರೂಪಾಯಿ ಹಣವನ್ನು ಕಳವು ಮಾಡಲಾಗಿದೆ.
ಕಳವು ಮಾಡಲಾದ ಹಣದ ಮೊತ್ತ 15 ಲಕ್ಷಕ್ಕೂ ಹೆಚ್ಚು ಎಂದು ತಿಳಿದುಬಂದಿದೆ. ಅಂಗಡಿಯ ಮಾಲೀಕರು ಇನ್ನೋವಾ ಕಾರು ಖರೀದಿಸುವ ಉದ್ದೇಶದಿಂದ ನಿನ್ನೆ ರಾತ್ರಿ 15 ಲಕ್ಷ ರೂಪಾಯಿಗಳನ್ನು ಅಂಗಡಿಯ ಡ್ರಾಯರಿನಲ್ಲಿ ಇಟ್ಟಿದ್ದರು.
ನಿನ್ನೆ ರಾತ್ರಿ ಅಂಗಡಿಗೆ ನುಗ್ಗಿದ್ದ ಕಳ್ಳರು ಆ ಹಣವನ್ನು ದೋಚಿದ್ದಾರೆ. ಆ ಹಣವನ್ನು ಕಳ್ಳರು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇಂದು ಬೆಳಿಗ್ಗೆ (ಸೆಪ್ಟೆಂಬರ್ 16) ಆ ಹಣ ಕಳವಾದದ್ದು ಅಂಗಡಿಯ ಮಾಲೀಕರಿಗೆ ಗೊತ್ತಾಗಿದೆ ಎನ್ನಲಾಗಿದೆ. ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7


