ಪುತ್ತೂರು, ಅ 14 :ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನೆಹರೂನಗರದ ವಿವೇಕಾನಂದ ಕಾಲೇಜು ಕ್ರೀಡಾ0ಗಣದಲ್ಲಿ ನಡೆದ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ.
ಬಾಲಕಿಯರ ವಿಭಾಗದ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿವ್ಯಾ ಎಂ ಅತ್ಯುತ್ತಮ ಆಲ್‌ರೌಂಡರ್ ಪ್ರಶಸ್ತಿ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ಷಾ ಸಿ ಎಚ್ ಅತ್ಯುತ್ತಮ ಚೇಸರ್ ಪ್ರಶಸ್ತಿ ಪಡೆದರು.
ಬಾಲಕರ ವಿಭಾಗದ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ನಿತಿನ್ ಕುಮಾರ್ ಅತ್ಯುತ್ತಮ ಆಲ್‌ರೌಂಡರ್ ಪ್ರಶಸ್ತಿ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ರಂಜನ್ ಕೆ.ಆರ್ ಅತ್ಯುತ್ತಮ ಚೇಸರ್ ಪ್ರಶಸ್ತಿ ಪಡೆದರು.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ನಿತಿನ್ ಕುಮಾರ್, ವಾಣಿಜ್ಯ ವಿಭಾಗದ ಎಚ್ ಅಭಿರಾಮ್, ವಿಜ್ಞಾನ ವಿಭಾಗದ ಮಂಜುನಾಥ್ ಎಸ್, ಸಾತ್ವಿಕ್ ಆರ್, ನಂದನ್ ಗೌಡ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವರುಣ್ ಕುಮಾರ್,ಜೀವನ್ ಎಸ್, ದೇಶಿಕ್ ಕೆ, ರಂಜನ್ ಕೆ.ಆರ್, ವಿಜ್ಞಾನ ವಿಭಾಗದ ಎಲ್. ಧನುಷ್. ಅಶ್ವಿತ್ ಭಂಡಾರಿ, ಮನ್ವಿತ್ ಬಿ ಗೌಡ, ಯಶವಂತ್ ಡಿ.ಎಸ್, ಶ್ರೇಯಸ್ ಪಿ, ಸುಹಾಸ್ ಕೆ ಭಾಗವಹಿಸಿದ್ದರು.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿವ್ಯ ಎಂ, ಭೂಮಿಕಾ ಬಿ.ಬಿ, ವಾಣಿಜ್ಯ ವಿಭಾಗದ ಜ್ಯೋತಿಕಾ ಪಿ, ಹಿತಶ್ರೀ, ವಿಜ್ಞಾನ ವಿಭಾಗದ ಪೂರ್ವಿಕ ಎ. ಎಸ್, ಪ್ರತೀಕ್ಷಾ ಸಿ ಎಚ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಸಂಸ್ಕೃತಿ ಜೈನ್, ದಿಶಾ ವಿ, ಪ್ರಕೃತಿ ಬಿ.ಯು, ನಿಶ್ಮಿತಾ, ಕಲಾ ವಿಭಾಗದ ಶಿವಾನಿ ಪಿ.ಕೆ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್‌ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

