ಕಾಸರಗೋಡು : ಭಾರತೀಯ ರಿಸರ್ವ್ ಬ್ಯಾಂಕಿನ ರಾಷ್ಟ್ರ ಮಟ್ಟದ ಎಫ್.ಐ.ಡಿ.ಡಿ.ಸಮ್ಮೇಳನ ಬೇಕಲದ ತಾಜ್ ರೆಸಾರ್ಟ್ ನಲ್ಲಿ ಸೆ.17 ರಂದು ಜರಗಿತು.
ಈ ಸಂದರ್ಭದಲ್ಲಿ ಮಂಗಳೂರಿನ ತೋನ್ಸೆ ಯಕ್ಷಬಳಗದಿಂದ ಇಂಗ್ಲಿಷ್ ಭಾಷೆಯಲ್ಲಿ ‘ಪಾಂಡವಾಶ್ವಮೇಧಂ’ ತೆಂಕುತಿಟ್ಟು ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ಯಾಡ್ಸ್ ಈವೆಂಟ್ಸ್ ಅವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವತರಾಗಿ ತೋನ್ಸೆ ಪುಷ್ಕಳ ಕುಮಾರ್, ಹಿಮ್ಮೇಳದಲ್ಲಿ ಶರತ್ ಕುಮಾರ್ ಕದ್ರಿ, ಸುದಾಸ್ ಕಾವೂರು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಸಹಕರಿಸಿದರು. ಪಾತ್ರಧಾರಿಗಳಾಗಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ರವಿ ಅಲೆವೂರಾಯ ವರ್ಕಾಡಿ, ಡಾ.ದಿನಕರ ಎಸ್.ಪಚ್ಚನಾಡಿ ಮತ್ತಿತರರು ಭಾಗವಹಿಸಿದ್ದರು.
ರಿಸರ್ವ್ ಬ್ಯಾಂಕಿನ ರಾಷ್ಟ್ರ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಭಾಗಗಳ ಪ್ರತಿನಿಧಿಗಳು ಯಕ್ಷಗಾನವನ್ನು ವೀಕ್ಷಿಸಿ ಕಲಾವಿದರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಕೇರಳದ ಕಲಾತಂಡದವರು ಕಥಕ್ಕಳಿ ನೃತ್ಯ ಪ್ರದರ್ಶನವನ್ನೂ ನೀಡಿದರು.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು