ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇಸ್ಲಾಮಿಕ್ ಸಂಘಟನೆಯಿಂದ 5.6 ಕೋಟಿ ರೂಪಾಯಿ ಪರಿಹಾರ ಕೋರಿ ಕೆಎಸ್‌ಆರ್‌ಟಿಸಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಹರತಾಳ ಘೋಷಿಸಿದವರಿಂದ ಪರಿಹಾರ ನೀಡುವಂತೆ ಕೆಎಸ್‌ಆರ್‌ಟಿಸಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪಿಎಫ್ಐ 5 ಕೋಟಿ 6 ಲಕ್ಷ ಪರಿಹಾರ ನೀಡಬೇಕು ಎಂದು ಕೆಎಸ್‌ಆರ್‌ಟಿಸಿ ಒತ್ತಾಯಿಸಿತು.
ಕೇರಳದಲ್ಲಿ ಕಳೆದ ಶುಕ್ರವಾರ ಪಾಪ್ಯುಲರ್ ಫ್ರಂಟ್ ಕರೆ ನೀಡಿದ್ದ ಹರತಾಳದ ನಂತರ ನಡೆದ ದಾಳಿಯಲ್ಲಿ 58 ಬಸ್ ಗಳನ್ನು ಧ್ವಂಸಗೊಳಿಸಲಾಗಿತ್ತು. ಹತ್ತು ನೌಕರರು ಗಾಯಗೊಂಡಿದ್ದಾರೆ.
ಇದೇ ವೇಳೆ ಪಾಪ್ಯುಲರ್ ಫ್ರಂಟ್ ನಡೆಸಿದ ಹರತಾಳದ ಅಂಗವಾಗಿ ನಡೆದ ದಾಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೆ 309 ಪ್ರಕರಣಗಳು ದಾಖಲಾಗಿವೆ. ವಿವಿಧ ದಾಳಿಗಳಲ್ಲಿ 1404 ಆರೋಪಿಗಳನ್ನು ಬಂಧಿಸಲಾಗಿದೆ.
834 ಮಂದಿ ಮುಂಜಾಗ್ರತಾ ಕ್ರಮದಲ್ಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಲಪ್ಪುರಂನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಮಲಪ್ಪುರಂನಲ್ಲಿ 34 ಪ್ರಕರಣಗಳು ದಾಖಲಾಗಿವೆ.
ಪೊಲೀಸರು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಕೊಟ್ಟಾಯಂನಲ್ಲಿ 28 ಪ್ರಕರಣಗಳು ದಾಖಲಾಗಿದ್ದು 215 ಜನರನ್ನು ಬಂಧಿಸಲಾಗಿದೆ. ಕಣ್ಣೂರು ನಗರವೊಂದರಲ್ಲೇ 26 ಪ್ರಕರಣಗಳು ದಾಖಲಾಗಿವೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ