ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕದಲ್ಲಿ ವೇಗವಾಗಿ ಬಂದ ಕಾರು ಅಪಘಾತದ ಸ್ಥಳದಲ್ಲಿ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು 13 ಮಂದಿ ಗಾಯಗೊಂಡಿದ್ದಾರೆ.
ಪಶ್ಚಿಮ ಉಪನಗರದಲ್ಲಿರುವ ಬಾಂದ್ರಾವನ್ನು ದಕ್ಷಿಣ ಮುಂಬೈನ ವರ್ಲಿಗೆ ಸಂಪರ್ಕಿಸುವ ಸಮುದ್ರ ಸಂಪರ್ಕ ಸೇತುವೆಯ ದಕ್ಷಿಣದ ಭಾಗದಲ್ಲಿರುವ ಕಂಬ ಸಂಖ್ಯೆ 76 ಮತ್ತು 78 ರ ನಡುವೆ ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.
“ಬಾಂದ್ರಾ ವರ್ಲಿ ಸೀ ಲಿಂಕ್ ರಸ್ತೆ ಅಪಘಾತದಲ್ಲಿ ಒಟ್ಟು 13 ಜನರು ಗಾಯಗೊಂಡಿದ್ದಾರೆ. ಅದರಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ, 8 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ ಎಂದು ಎಎನ್‌ಐ ತಿಳಿಸಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರ ನೆರವಿನಿಂದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಬಾಂದ್ರಾದಿಂದ ವರ್ಲಿಗೆ ಹೋಗುವ ರಸ್ತೆಯನ್ನು ಮುಚ್ಚಲಾಗಿದೆ. ಇದೇ ವೇಳೆ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದರು.